ಯಾದಗಿರಿ: ಶೈಕ್ಷಣಿಕ ವರ್ಷ ಪ್ರಾರಂಭವಾಗಿ ತಿಂಗಳು ಕಳೆಯುವಷ್ಟರಲ್ಲಿ ಮತ್ತೊಮ್ಮೆ ಶಿಕ್ಷಕರ ವರ್ಗಾವಣೆಯ ಗುಮ್ಮ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಶಿಕ್ಷಕರಿಲ್ಲದೇ ನರಳುತ್ತಿರುವ ಮಕ್ಕಳಿಗೆ, ಮತ್ತಷ್ಟು ಶಿಕ್ಷಕರ ಕೊರತೆ ಎದುರಾಗುವ ಸಾಧ್ಯತೆಗಳು ದಟ್ಟವಾಗುತ್ತಿವೆ.

ಕಳೆದ ಮೂರ್ನಾಲ್ಕು ವರ್ಷ ನಡೆದ ವರ್ಗಾವಣೆಯಿಂದಾಗಿ ಜಿಲ್ಲೆಯಲ್ಲಿ ಸದ್ಯಕ್ಕೆ ಸುಮಾರು 1,100 ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ಎದುರಾಗಿದೆ. ಇದೀಗ ನಡೆಯುತ್ತಿರುವ ವರ್ಗಾವಣೆ ಪ್ರಕ್ರಿಯೆಯಿಂದ ಈ ಸಂಖ್ಯೆ ಮತ್ತಷ್ಟು ಏರಿಕೆ ಆಗಬಹುದು ಎಂದು ಇಲಾಖೆಯ ಅಧಿಕಾರಿಗಳೇ ಹೇಳುತ್ತಿದ್ದಾರೆ.

ಯಾದಗಿರಿ ಸೇರಿದಂತೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಸಾಕಷ್ಟಿದೆ. ಒಂದೆಡೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಇನ್ನೊಂದೆಡೆ ವರ್ಗಾವಣೆ ಪ್ರಕ್ರಿಯೆಯನ್ನು ಕೈಬಿಡುವಂತಿಲ್ಲ. ಕಳೆದ ವರ್ಷ ನೇಮಕಾತಿ ಆರಂಭವಾಗಿದ್ದರೂ, ನಂತರ ಪ್ರಕ್ರಿಯೆ ಸ್ಥಗಿತಗೊಂಡಿತು.

ಇದೀಗ ಹೊಸ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಬಗ್ಗೆ ಪ್ರಸ್ತಾಪಿಸಿದ್ದು, ಪ್ರಕ್ರಿಯೆ ಯಾವಾಗ ಆರಂಭವಾಗಲಿದೆಯೋ ತಿಳಿಯುತ್ತಿಲ್ಲ.

ಇದರ ಮಧ್ಯೆ ಸಂವಿಧಾನದ 371 ನೇ ಕಲಂ ತಿದ್ದುಪಡಿ ಮಸೂದೆ ಜಾರಿಯಾಗುವವರೆಗೆ ಶಿಕ್ಷಕರ ನೇಮಕಾತಿಯನ್ನೂ ತಡೆಹಿಡಿಯಲಾಗುತ್ತಿದೆ. ಹೀಗಾಗಿ ಈ ಭಾಗದ ಜಿಲ್ಲೆಯ ಅನೇಕ ಪ್ರಾಥಮಿಕ ಶಾಲೆಗಳು ಶಿಕ್ಷಕರ ಕೊರತೆ ಎದುರಿಸುವಂತಾಗಿದೆ ಎಂದು ಹೇಳಲಾಗುತ್ತಿದೆ.

ಜಿಲ್ಲೆಯಲ್ಲಿ 1,077 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸುಮಾರು 1,87,710 ಮಕ್ಕಳ ದಾಖಲಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಕೊರತೆಯಿಲ್ಲ. ಕಡಿಮೆ ಮಕ್ಕಳಿರುವ ಶಾಲೆಗಳ ವಿಲೀನಗೊಳಿಸುವ ಸರ್ಕಾರದ ಕ್ರಮದಿಂದ ಜಿಲ್ಲೆಯಲ್ಲಿ ಯಾವುದೇ ಪರಿಣಾಮ ಬೀರುತ್ತಿಲ್ಲ.

ಕಡಿಮೆ ಮಕ್ಕಳಿರುವ ಶಾಲೆಗಳನ್ನು ವಿಲೀನಗೊಳಿಸುವ ಸರ್ಕಾರ, ಹೆಚ್ಚಿನ ಸಂಖ್ಯೆಯ ಮಕ್ಕಳಿರುವಲ್ಲಿ ಶಿಕ್ಷಕರ ನೇಮಕಾತಿಯ ಬಗ್ಗೆ ಗಮನಹರಿಸುತ್ತಿಲ್ಲ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಂಜೂರಾಗಿರುವ ಹುದ್ದೆಯ ಅರ್ಧದಷ್ಟು ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂದು ನೇತಾಜಿ ಯುವ ಸೇನೆಯ ಅಧ್ಯಕ್ಷ ನಿಂಗು ಜಡಿ ಹೇಳುತ್ತಾರೆ.

1,100 ಶಿಕ್ಷಕರ ಹುದ್ದೆ ಖಾಲಿ: ಕಳೆದ ಮೂರು ವರ್ಷಗಳಿಂದ ವರ್ಗಾವಣೆ ಆದಷ್ಟು ಶಿಕ್ಷಕರು ಜಿಲ್ಲೆಗೆ ಬರುತ್ತಿಲ್ಲ. ಇಲ್ಲಿಂದ ಹೊರಗೆ ಹೋಗುವವರ ಸಂಖ್ಯೆಗೂ ಹಾಗೂ ಹೊರ ಜಿಲ್ಲೆಗಳಿಂದ ಇಲ್ಲಿಗೆ ಬರುವವರ ಸಂಖ್ಯೆಯೂ ಸಾಕಷ್ಟು ವ್ಯತ್ಯಾಸವಾಗುತ್ತಿದೆ.

ಕಳೆದ ವರ್ಷವೇ ಜಿಲ್ಲೆಯಲ್ಲಿ 1,100 ರಷ್ಟು ಶಿಕ್ಷಕರ ಹುದ್ದೆ ಖಾಲಿ ಉಳಿದಿದ್ದವು. ಇದೀಗ ಈಗ ಮತ್ತೆ ಶೇ.1 ರಷ್ಟು ಶಿಕ್ಷಕ ಅಂತರ ಜಿಲ್ಲಾ ವರ್ಗಾವಣೆ ನಿಶ್ಚಿತ ಎಂದು ಹೇಳಲಾಗುತ್ತಿದೆ. ಆದರೆ ಈ ಬಾರಿಯೂ ಬೇರೆ ಜಿಲ್ಲೆಗಳಿಂದ ವರ್ಗಾವಣೆ ಮಾಡಿಸಿಕೊಂಡು ಯಾದಗಿರಿ ಜಿಲ್ಲೆಗೆ ಬರುವ ಶಿಕ್ಷಕರು ಬೆರಳೆಣಿಕೆಯಷ್ಟು ಮಾತ್ರ. ಹೀಗಾಗಿ ಈ ಬಾರಿಯೂ ಶಿಕ್ಷಕರ ಹುದ್ದೆಗಳ ಕೊರತೆ ಮತ್ತಷ್ಟು ಹೆಚ್ಚಾಗಲಿದೆ.

ಯಾದಗಿರಿ ಜಿಲ್ಲೆಯೂ ಶಿಕ್ಷಕರ ಪ್ರಾರಂಭಿಕ ತಾಣವಾಗಿ ಪರಿಣಮಿಸಿದೆ. ಯಾದಗಿರಿ ಜಿಲ್ಲೆಗೆ ಮಂಜೂರಾಗಿರುವ ಹುದ್ದೆಗಳು ಸುಲಭವಾಗಿ ಸಿಗುವುದರಿಂದ ಬೇರೆ ಜಿಲ್ಲೆಗಳ ಅಭ್ಯರ್ಥಿಗಳು ಇಲ್ಲಿಗೆ ಆಯ್ಕೆಯಾಗಿ ಬರುತ್ತಾರೆ.

ಜಿಲ್ಲೆಯಲ್ಲಿ ನೇಮಕಗೊಂಡು 2-3 ವರ್ಷ ಕಳೆಯುವಷ್ಟರಲ್ಲಿಯೇ ಯಾವುದಾರೂ ನೆಪವೊಡ್ಡಿ ವರ್ಗಾವಣೆ ಮಾಡಿಸಿಕೊಂಡು ಹೋಗುತ್ತಾರೆ.

ಆದರೆ ಬೇರೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯಾರೂ ಇಲ್ಲಿಗೆ ಬರುತ್ತಿಲ್ಲ. ಪ್ರತಿ ವರ್ಗಾವಣೆ ಸಂದರ್ಭದಲ್ಲೂ ಶಿಕ್ಷಕರು ಹುದ್ದೆಗಳು ಖಾಲಿಯಾಗುತ್ತಿವೆಯೇ ಹೊರತು ಅದಕ್ಕೆ ಅನುಗುಣವಾಗಿ ಶಿಕ್ಷಕರು ಬರುತ್ತಿಲ್ಲ.

ಗೌರವ ಶಿಕ್ಷಕರ ನೇಮಕಕ್ಕೆ ಕ್ರಮ: ಜಿಲ್ಲೆಯಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಗೌರವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ದೊರೆತ ತಕ್ಷಣ ಅವಶ್ಯಕತೆ ಇರುವ ಶಾಲೆಗಳಲ್ಲಿ ಗೌರವ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಡಿಡಿಪಿಐ ರಾಮಾಂಜನೇಯ ಹೇಳುತ್ತಾರೆ.

ಸರ್ಕಾರ ನಿಯಮಾವಳಿಗಳ ಪ್ರಕಾರ ವರ್ಗಾವಣೆ ಮಾಡುವುದು ಅನಿವಾರ್ಯ. ಕಳೆದ ಮೂರ್ನಾಲ್ಕು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಇಲ್ಲದೇ ಇರುವುದರಿಂದ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಆದರೂ ಗೌರವ ಶಿಕ್ಷಕರ ನೇಮಕಾತಿ ಮೂಲಕ ಶಿಕ್ಷಕರ ಕೊರತೆಯನ್ನು ಆದಷ್ಟು ನೀಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.