ಮಂಗಳವಾರ, ಜೂನ್ 22, 2021
28 °C

ಸರ್ಕಾರಿ ಆಸ್ಪತ್ರೆಗೆ 15 ಕಾನ್ಸಂಟ್ರೇಟರ್‌ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಹಾಪುರ: ಬಿಜೆಪಿ ಮುಖಂಡ ಅಮೀನರೆಡ್ಡಿ ಪಾಟೀಲ ಯಾಳಗಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ₹7.50 ಲಕ್ಷ ವೆಚ್ಚದಲ್ಲಿ 15 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಯಿತು.

ನಂತರ ಮಾತನಾಡಿದ ಅಮೀನರೆಡ್ಡಿ ಪಾಟೀಲ ಅವರು, ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಇರುವುದಾಗಿ ತಿಳಿದುಬಂದಿತ್ತು. ರೋಗಿಗಳು ಆಮ್ಲಜನಕ ಕೊರತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ನಮ್ಮ ಟ್ರಸ್ಟ್ ವತಿಯಿಂದ 15 ಕಾನ್ಸಂಟ್ರೇಟರ್‌ಗಳನ್ನು ಕೊಡುಗೆಯಾಗಿ ನೀಡಲಾಗಿದೆ ಎಂದರು.

ಅಲ್ಲದೆ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸರು, ಗೃಹರಕ್ಷಕ ದಳ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವರು ಇದ್ದ ಸ್ಥಳಕ್ಕೆ ತೆರಳಿ ಆಹಾರದ ಕಿಟ್ ನೀಡಲಾಗುವುದು ಎಂದು ಹೇಳಿದರು.

ನಾವೆಲ್ಲರೂ ಅತ್ಯಂತ ಸಂಕಷ್ಟದಲ್ಲಿ ಇದ್ದೇವೆ. ಇಂತಹ ಸಂದರ್ಭದಲ್ಲಿ ದಾನಿಗಳು ತಮ್ಮ ಕೈಲಾದ ಮಟ್ಟಿಗೆ ನೆರವು ನೀಡಬೇಕು ಎಂದು ಯಾದಗಿರಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ, ಮುಖಂಡರಾದ ಡಾ.ಚಂದ್ರಶೇಖರ ಸುಬೇದಾರ, ಬಸವರಾಜ ವಿಭೂತಿಹಳ್ಳಿ, ಯಲ್ಲಯ್ಯ ನಾಯಕ ವನದುರ್ಗ, ಬಸನಗೌಡ ಹಾರಣಗೇರಾ, ಮಾಣಿಕರೆಡ್ಡಿ ಮಲ್ಹಾರ, ಪ್ರಕಾಶರೆಡ್ಡಿ (ಗುಂಡು) ಯಾಳಗಿ, ರಾಜಶೇಖರ ಗೂಗಲ್, ಚೆಂದಪ್ಪ ಸೇರಿ ಸಗರ, ತಿರುಪತಿರೆಡ್ಡಿ ಪದರೆಡ್ಡಿ, ಮಹೇಶಗೌಡ ಆಲ್ದಾಳ, ಮಲ್ಲಿಕಾರ್ಜುನ ಕಂದಕೂರ, ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೆದಾರ, ಡಾ.ಮಲ್ಲಪ್ಪ ಕಣಜಿಗಿಕರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು