ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲೆಯಲ್ಲಿ 153 ಜನರಿಗೆ ಕೋವಿಡ್‌ ದೃಢ

Last Updated 17 ಏಪ್ರಿಲ್ 2021, 9:22 IST
ಅಕ್ಷರ ಗಾತ್ರ

ಯಾದಗಿರಿ:ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 153 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,450ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 550 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಏ.16ರ ಶುಕ್ರವಾರ 15 ಜನರು ಸಂಪೂರ್ಣ ಚೇತರಿಸಿಕೊಂಡಿದ್ದು, ಒಟ್ಟಾರೆ ಇಲ್ಲಿಯವರೆಗೆ 10,837 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ ಎಂದುಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT