ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ₹18 ಕೋಟಿ ವೆಚ್ಚ: ಸಚಿವ ಪೂಜಾರಿ

ಬೆಂಡೆಬೆಂಬಳಿ ಮೊರಾರ್ಜಿ ಶಾಲೆಯಲ್ಲಿ ಕರಾಟೆ ವೀಕ್ಷಿಸಿದ ಸಚಿವ ಪೂಜಾರಿ
Last Updated 7 ಫೆಬ್ರುವರಿ 2023, 17:02 IST
ಅಕ್ಷರ ಗಾತ್ರ

ಯಾದಗಿರಿ: ರಾಜ್ಯ ವಸತಿ ಶಾಲೆಗಳ ಹೆಣ್ಣುಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ‘ಕರಾಟೆ’ ಯೋಜನೆಯಡಿ ಕರಾಟೆ ಯೋಜನೆಯ ಅನುಷ್ಠಾನಕ್ಕಾಗಿ ₹18 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಸ್ವಯಂ ರಕ್ಷಣಾ ಕೌಶಲ (ಕರಾಟೆ) ಪ್ರದರ್ಶನವನ್ನು ವೀಕ್ಷಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳ ಆತ್ಮರಕ್ಷಣೆ ಕಲೆ ಅಗತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರಂಭಿಸಿದ್ದು, ಸುಮಾರು ಒಂದು ಸಾವಿರ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳ ಕರಾಟೆ ಕಲೆ ಹಾಗೂ ಸಮವಸ್ತ್ರಕ್ಕಾಗಿ ₹18 ಕೋಟಿ ವೆಚ್ಚಮಾಡಲಾಗುತ್ತಿದೆ ಎಂದು ತಿಳಿಸಿದರು.

ಬಡವರು, ಆರ್ಥಿಕವಾಗಿ ಹಿಂದುಳಿದವರು, ಅಲೆಮಾರಿಗಳ ಮಕ್ಕಳೇ ವಿಶೇಷವಾಗಿ ಈ ವಸತಿ ಶಾಲೆಗಳಿಗೆ ದಾಖಲಾಗುತ್ತಿದ್ದು, ಈ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ವಸತಿಶಾಲೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು
ತಿಳಿಸಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಚಿವರು ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ದೇವೆಂದ್ರನಾಥ ಕೆ.ನಾದ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶಕುಮಾರ, ವಸತಿ ಶಿಕ್ಷಣ ಸಂಸ್ಥೆಗಳ ಸಹಾಯಕ ಕಾರ್ಯನಿರ್ವಾಹಕ ರಮೇಶಕುಮಾರ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಭುದೊರೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT