ಭಾನುವಾರ, ಸೆಪ್ಟೆಂಬರ್ 27, 2020
27 °C
17 ಗೇಟ್‌ಗಳ ಮೂಲಕ ನೀರು ಬಿಡುಗಡೆ

ನಾರಾಯಣಪುರ ಡ್ಯಾಂನಿಂದ 1.80 ಲಕ್ಷ ಕ್ಯುಸೆಕ್ ನೀರು ನದಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಶುಕ್ರವಾರ ಸಂಜೆ 17 ಮುಖ್ಯ ಕ್ರಸ್ಟ್ ಗೇಟ್‌ಗಳ ಮೂಲಕ 1.80 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಕೃಷ್ಣೆ ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿದ್ದು ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ನದಿ ಪಾತ್ರದಲ್ಲಿರುವ ಹಳ್ಳಿಗಳ ಜನರ ಆತಂಕ ಹೆಚ್ಚಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ನಿಟ್ಟಿನಲ್ಲಿ ಬಹುತೇಕ ನೀರು ಕೃಷ್ಣೆಗೆ ಹರಿದು ಬರುತ್ತಿದೆ. ಇದರಿಂದಾಗಿ ಹೆಚ್ಚಿನ ನೀರು ನದಿ ಪಾತ್ರದಲ್ಲಿರುವ ಜಮೀನುಗಳಿಗೆ ಕೂಡಾ ನುಗ್ಗುತ್ತಿದೆ ಎಂದು ಗೆದ್ದಲಮರಿ ಗ್ರಾಮದ ರೈತರು ತಿಳಿಸಿದರು.

492.25 ಮೀಟರ್ ಒಟ್ಟು 33 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ನಾರಾಯಣಪುರ ಬಸವಸಾಗರ ಜಲಾಶಯದಲ್ಲಿ ಶುಕ್ರವಾರ ಸಂಜೆ 490.70 ಮೀಟರ್ ನಷ್ಟು ನೀರು ಸಂಗ್ರಹವಿದ್ದು, 1.80 ಲಕ್ಷ ಕ್ಯುಸೆಕ್ ನಷ್ಟು ನೀರು ಹರಿದು ಬರುತ್ತಿದ್ದು, ಅದೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಡ್ಯಾಂ ಡಿವಿಜನ್ ಮೂಲಗಳು
ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು