₹25 ಸಾವಿರ ಮೌಲ್ಯದ ವಿವಿಧ ಬಗೆಯ ಅಕ್ರಮ ಮದ್ಯ ವಶ: ದೂರು ದಾಖಲು

ಕೆಂಭಾವಿ: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ₹25 ಸಾವಿರ ಮೌಲ್ಯದ ವಿವಿಧ ಬಗೆಯ ಮದ್ಯದ ಬಾಟಲಿಗಳನ್ನು ಸೋಮವಾರ ರಾತ್ರಿ ಡಿವೈಎಸ್‌ಪಿ ವೆಂಕಟೇಶ ಉಗಿಬಂಡಿ ನೇತೃತ್ವದ ತಂಡ ಬೈಚಬಾಳ ಗ್ರಾಮದಲ್ಲಿ ವಶಪಡಿಸಿಕೊಂಡಿದೆ.
ಖಚಿತ ಮಾಹಿತಿ ಮೇರೆಗೆ ಬೈಚಬಾಳ ಗ್ರಾಮದ ಕಿರಾಣಿ ಅಂಗಡಿಯೊಂದರ ಪಕ್ಕದಲ್ಲಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ವಿವಿಧ ಬಗೆಯ ಮದ್ಯ ಜಪ್ತಿ ಮಾಡಲಾಗಿದೆ. ಘಟನೆ ಸಂಬಂಧ ಮಹಿಳೆ ಸೇರಿದಂತೆ ಮೂವರ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಿಎಸ್‌ಐ ಗಜಾನನ ಬಿರಾದಾರ, ಪೊಲೀಸ್ ಸಿಬ್ಬಂದಿ ಶಿವಲಿಂಗ, ಶಂಕರಗೌಡ, ಪ್ರಕಾಶ, ಸುಭಾಸ್, ಚಂದಪ್ಪ, ಚನ್ನಪ್ಪಗೌಡ ಹಾಗೂ ಮಂಜುನಾಥ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.