ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27 ಪ್ರಕರಣ ದಾಖಲು, ₹8 ಸಾವಿರ ದಂಡ

ನಿಷೇಧಿತ ಪ್ಲಾಸ್ಟಿಕ್, ತಂಬಾಕು ಮಾರಾಟ: ಅನಿರೀಕ್ಷಿತ ದಾಳಿ
Last Updated 4 ಜನವರಿ 2020, 9:51 IST
ಅಕ್ಷರ ಗಾತ್ರ

ಯಾದಗಿರಿ: ತಾಲ್ಲೂಕಿನ ವಿಶ್ವಾಸಪುರ, ಬಸವಂತಪುರ, ಠಾಣಗುಂದಿ, ಕ್ಯಾಸಪನಹಳ್ಳಿ ಹಾಗೂ ಅಲ್ಲಿಪುರ ಗ್ರಾಮಗಳ ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಗುರುವಾರ ಅನಿರೀಕ್ಷಿತ ದಾಳಿ ನಡೆಸಿದ ಅಧಿಕಾರಿಗಳ ತಂಡ ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 27 ಪ್ರಕರಣಗಳನ್ನು ದಾಖಲಿಸಿಕೊಂಡು, ₹8 ಸಾವಿರಕ್ಕೂ ಅಧಿಕ ದಂಡ ವಿಧಿಸಲಾಗಿದೆ.

ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್‌ಮಾತನಾಡಿ, ಜಿಲ್ಲಾಧಿಕಾರಿ ಆದೇಶ ಮೇರೆಗೆ ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ ಎಂದುತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಮಹಾಲಕ್ಷ್ಮಿಸಜ್ಜನ್ಮಾತನಾಡಿ,ದಾಳಿಯಲ್ಲಿ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಸೆಕ್ಷನ್ 5ರಲ್ಲಿ 6 ನೋಟಿಸ್‌ನೀಡಲಾಗಿರುತ್ತದೆ. ಸೆಕ್ಷನ್ 7ರಲ್ಲಿ 3 ನೋಟಿಸ್‌ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಮಿಕ ಇಲಾಖೆ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಸಾಬಯ್ಯ ಮತ್ತು ವೆಂಕಟೇಶ ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT