ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮನರೇಗಾದಲ್ಲಿ ರಾಜ್ಯಕ್ಕೆ 2ನೇ ಸ್ಥಾನ’

‘ಅಂತರ್ಜಲ ಚೇತನ’ ಕಾರ್ಯಕ್ರಮಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ
Last Updated 5 ಜೂನ್ 2020, 16:40 IST
ಅಕ್ಷರ ಗಾತ್ರ

ಯಾದಗಿರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನದಲ್ಲಿ ದೇಶದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಸಮ್ಮಿಳಿತಗೊಳಿಸಿ ಜಲಮೂಲಗಳ ಪುನಃಶ್ಚೇತನಗೊಳಿಸಲು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸುತ್ತಿರುವ ‘ಅಂತರ್ಜಲ ಚೇತನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

30 ವರ್ಷಗಳ ಹಿಂದೆ ಭೂಮಿಯು ಶೇ.30-40 ರಷ್ಟು ಮಳೆ ನೀರನ್ನು ಇಂಗುತ್ತಿತ್ತು. ಮನುಷ್ಯನ ಆಕ್ರಮಣದಿಂದ ಈಗ ಭೂಮಿ ಇಂಗುವಿಕೆ ಪ್ರಮಾಣ ಶೇ.5ಕ್ಕೆ ಇಳಿದಿದೆ. ಅಂತರ್ಜಲ ಹೆಚ್ಚಳಕ್ಕಾಗಿ ಆರ್ಟ್ ಆಫ್ ಲಿವಿಂಗ್ ಸಹಭಾಗಿತ್ವದಲ್ಲಿ ‘ಅಂತರ್ಜಲ ಚೇತನ’ ಯೋಜನೆಯನ್ನು ಜಾರಿಗೆ ತಂದಿದೆ. ಇನ್ನು 3-4 ವರ್ಷಗಳಲ್ಲಿ ಭೂಮಿ ಇಂಗುವಿಕೆ ಪ್ರಮಾಣ ಶೇ.30-40 ರಷ್ಟು ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಳೆ, ಪಪ್ಪಾಯ ಸೇರ್ಪಡೆ: 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಮನರೇಗಾ ಯೋಜನೆಯಡಿ ಹಣ ನೀಡಲಾಗುತ್ತಿದೆಎಂದು ತಿಳಿಸಿದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಲಾಕ್‍ಡೌನ್‍ನಿಂದ ಜಿಲ್ಲೆಗೆ ವಾಪಸ್ಸಾದ ವಲಸೆ ಕಾರ್ಮಿಕರಿಗೆ ಈ ಯೋಜನೆಯು ವರದಾನವಾಗಿದೆ ಎಂದು ಹೇಳಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಶಾಸಕರಾದ ನರಸಿಂಹ ನಾಯಕ (ರಾಜೂಗೌಡ), ಶರಣಬಸಪ್ಪಗೌಡ ದರ್ಶನಾಪುರ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಾಗರಾಜ ಗಂಗೊಳ್ಳಿ, ರವೀಂದ್ರ ದೇಸಾಯಿ ಸೇರಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯರು ಇದ್ದರು.

***

ಕಳೆದ 2 ತಿಂಗಳಲ್ಲಿ ಮನರೇಗಾ ಯೋಜನೆಯಡಿ ಜಿಲ್ಲೆಯ ಸುಮಾರು 25 ಸಾವಿರ ಕುಟುಂಬಗಳಿಗೆ ಕೆಲಸ ನೀಡಲಾಗಿದೆ

ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಒ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT