ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಹೋಮ್ ಕ್ವಾರಂಟೈನ್‍ನಲ್ಲಿ 32 ಜನ

28 ದಿನಗಳ ಅವಲೋಕನ ಅವಧಿ ಪೂರೈಸಿದ 39 ಜನ
Last Updated 8 ಏಪ್ರಿಲ್ 2020, 16:22 IST
ಅಕ್ಷರ ಗಾತ್ರ

ಯಾದಗಿರಿ: ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ ಒಟ್ಟು 71 ಜನರ ಪೈಕಿ 39 ಜನರು 28 ದಿನಗಳ ಅವಲೋಕನ ಅವಧಿ ಪೂರ್ಣಗೊಳಿಸಿದ್ದು, ಬಾಕಿ 32 ಜನರನ್ನು ಅವರ ಮನೆಯಲ್ಲಿ ಪ್ರತ್ಯೇಕವಾಗಿ ಹೋಮ್ ಕ್ವಾರಂಟೈನ್‍ನಲ್ಲಿರಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದ್ದಾರೆ.

ಯಾದಗಿರಿ ತಾಲ್ಲೂಕಿನಲ್ಲಿ 30 ಜನ, ಶಹಾಪುರ ತಾಲ್ಲೂಕಿನಲ್ಲಿ 19 ಹಾಗೂ ಸುರಪುರ ತಾಲ್ಲೂಕಿನಲ್ಲಿ 22 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 71 ಜನ ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿತ್ತು. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ.

21 ಮಾದರಿಗಳ ವರದಿ ಬಾಕಿ: ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಕಳುಹಿಸಿದ್ದ ಒಟ್ಟು 42 ಮಾದರಿಗಳ ಪೈಕಿ ಈಗಾಗಲೇ 21 ವರದಿ ನೆಗೆಟಿವ್ ಬಂದಿವೆ. ಬಾಕಿ 21 ಮಾದರಿಗಳ ವರದಿ ಬರಬೇಕಿದೆ. ಅರಕೇರಾ (ಕೆ) ಹಾಸ್ಟೆಲ್‍ನ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 20 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT