ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

34 ತೊಗರಿ ಖರೀದಿ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ ಎಂ.ಕುರ್ಮಾರಾವ್‌

Last Updated 29 ಡಿಸೆಂಬರ್ 2019, 9:28 IST
ಅಕ್ಷರ ಗಾತ್ರ

ಯಾದಗಿರಿ: 2019-20ನೇ ಸಾಲಿನ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಜಿಲ್ಲೆಯಲ್ಲಿ 34 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.

ಪ್ರತಿ ಕ್ವಿಂಟಲ್ ತೊಗರಿಗೆ ಸರ್ಕಾರದ ಬೆಂಬಲ ಬೆಲೆ ₹ 6,100 ಇದ್ದು, ಪ್ರತಿಯೊಬ್ಬ ರೈತರಿಂದ ಎಕರೆಗೆ 5 ಕ್ವಿಂಟಲ್‍ನಂತೆ ಗರಿಷ್ಠ 10 ಕ್ವಿಂಟಲ್ ಖರೀದಿಸಲಾಗುವುದು. ಜಿಲ್ಲೆಯಲ್ಲಿ ಯಾದಗಿರಿ, ರಾಮಸಮುದ್ರ, ಸೈದಾಪುರ, ಗುರುಮಠಕಲ್, ಕೊಂಕಲ್, ಚಪೇಟ್ಲಾ, ಗಣಪುರ, ಹತ್ತಿಕುಣಿ, ಅಲ್ಲಿಪುರ, ಯಲ್ಹೇರಿ, ಅನಪುರ, ಯರಗೋಳ, ಪುಟಪಾಕ್, ಶಹಾಪುರ, ರಸ್ತಾಪುರ, ಬೆಂಡೆಬೆಂಬಳಿ, ಗಂಗನಾಳ, ಚಾಮನಾಳ, ಹೈಯಾಳ, ದೋರನಹಳ್ಳಿ, ಶಿರವಾಳ, ಟೊಕಾಪುರ, ಹೊಸಕೇರಾ, ಮದ್ರಿಕಿ, ಸುರಪುರ, ಏವೂರು, ಯಾಳಗಿ, ಕಕ್ಕೇರಾ, ಕೊಡೇಕಲ್, ನಗನೂರು, ಮಾಲಗತ್ತಿ, ರಾಜನಕೋಳೂರು, ಹುಣಸಗಿ ಮತ್ತು ಕೆಂಭಾವಿ-2ರಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ಡಿಸೆಂಬರ್ 28ರಿಂದ ಜನವರಿ 10ರವರೆಗೆ ರೈತರ ಹೆಸರು ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ರೈತರು ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ಆಧಾರ್ ಕಾರ್ಡ್, ಆಧಾರ್ ಜೋಡಣೆಯ ಬ್ಯಾಂಕ್ ಪಾಸ್ ಬುಕ್‌, ಪಹಣಿ, ಬೆಳೆ ದೃಢೀಕರಣ ಪತ್ರದ ಪ್ರತಿಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ಒಬ್ಬ ರೈತ ಒಂದೇ ಅರ್ಜಿಯನ್ನು ಖರೀದಿ ಕೇಂದ್ರಕ್ಕೆ ತರಬೇಕು. ಸರತಿಯಲ್ಲಿ ನಿಂತು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT