ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ನದಿಗೆ 38 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Published 4 ಆಗಸ್ಟ್ 2023, 14:31 IST
Last Updated 4 ಆಗಸ್ಟ್ 2023, 14:31 IST
ಅಕ್ಷರ ಗಾತ್ರ

ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಶುಕ್ರವಾರ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯದ 18 ಕ್ರಸ್ಟ್‌ ಗೇಟ್‌ ತೆರೆದು 38 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ.

ಆಲಮಟ್ಟಿ ಲಾಲ್‌ ಬಹದ್ದೂರ್‌ ಶಾಸ್ತ್ರೀ ಜಲಾಶಯಕ್ಕೆ 84 ಸಾವಿರ ಕ್ಯುಸೆಕ್‌ ಒಳಹರಿವು ಇದ್ದು, ಬಸವಸಾಗರಕ್ಕೆ 42 ಸಾವಿರ ಕ್ಯುಸೆಕ್‌ ನೀರನ್ನು ಬಿಡಲಾಗಿದೆ. 

ಜಲಾಶಯದ ‌ಇಂದಿನ ನೀರಿನ ಮಟ್ಟ

ಜಲಾಶಯದ ಗರಿಷ್ಠ ಮಟ್ಟ 492.25 ಮೀ.ನಲ್ಲಿ ಶುಕ್ರವಾರ 491.57 ಮೀ. ನೀರಿದ್ದು, 33.31 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಹೊಂದಿದ್ದು, ಸದ್ಯ 30.21 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಒಳಹರಿವು 42 ಸಾವಿರ ಕ್ಯುಸೆಕ್ ಇದ್ದರೆ, ಹೊರ ಹರಿವು 38 ಸಾವಿರ ಕ್ಯುಸೆಕ್ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT