ಯಾದಗಿರಿ: ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್-19 ಲಸಿಕೆ ವಿತರಣೆ ಕಾರ್ಯ ಫೆ.8ರಿಂದ ಆರಂಭವಾಗಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಎರಡನೇಯ ಹಂತದ ಕೋವಿಡ್ ಲಸಿಕೆ ವಿತರಣೆಯ ಜಿಲ್ಲಾ ಮಟ್ಟದ ಕಾರ್ಯಪಡೆ (ಟಾಸ್ಕ್ಫೋರ್ಸ್) ಸಭೆಯಲ್ಲಿ ಅವರು ಮಾತನಾಡಿದರು.

ಎರಡನೇ ಹಂತದ ಲಸಿಕೆಯನ್ನು ಕೊರೊನಾ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಅಗ್ನಿ ಶಾಮಕದಳ, ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿತರಿಸಲಾಗುವುದು
ಎಂದರು.

ಜಿಲ್ಲೆಯಲ್ಲಿ 15 ಕೇಂದ್ರ: ಎರಡನೇ ಹಂತದ ಲಸಿಕೆಗೆ ಈಗಾಗಲೇ 4,113 ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ವಿತರಣಾ ಕೇಂದ್ರಗಳನ್ನು ಪ್ರತಿ ತಾಲ್ಲೂಕಿನಿಂದ 5 ಆರೋಗ್ಯ ಸಂಸ್ಥೆಗಳಂತೆ ಜಿಲ್ಲೆಯಲ್ಲಿ 15 ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲೆಯ ಎಲ್ಲ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರಂತರ ಸಂಪರ್ಕದಲ್ಲಿದ್ದುಕೊಂಡು ಕೋವಿಡ್ ಲಸಿಕೆ ವಿತರಿಸುವಂತೆ
ಸೂಚಿಸಿದರು.

ಶೇ70ರಷ್ಟು ಗುರಿ ಸಾಧಿಸಿ: ಮೊದಲ ಹಂತದಲ್ಲಿ ಈಗಾಗಲೇ ನೋಂದಣಿಯಾದ 6,213 ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಗೆ ಚಿಕಿತ್ಸೆ ನೀಡುವ ಮೂಲಕ ಸೋಮವಾರದೊಳಗೆ ಶೇ 70ರಷ್ಟು ಗುರಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಆರ್ಸಿಎಚ್ ಅಧಿಕಾರಿ ಡಾ.ಸೂರ್ಯಪ್ರಕಾಶ ಕಂದಕೂರ, ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ ಕವಿತಾಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.