ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | 2,128 ವರದಿ ನೆಗೆಟಿವ್: 4,521 ವರದಿಗಳು ಬಾಕಿ

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಮಾಹಿತಿ
Last Updated 26 ಮೇ 2020, 15:58 IST
ಅಕ್ಷರ ಗಾತ್ರ

ಯಾದಗಿರಿ: ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳ ಪೈಕಿ ಮೇ 26ರಂದು ಒಂದೇ ದಿನ 2,128 ವರದಿ ನೆಗೆಟಿವ್ ಬಂದಿದ್ದು, ಇಲ್ಲಿಯವರೆಗೆ ಒಟ್ಟು 5,291 ಮಾದರಿಗಳ ವರದಿ ನೆಗೆಟಿವ್ ಬಂದಂತಾಗಿದೆ. ಮಂಗಳವಾರ ಕಳುಹಿಸಲಾದ 1,719 ಹೊಸ ಮಾದರಿಗಳು ಸೇರಿ 4,521 ಮಾದರಿಗಳ ವರದಿ ಬರಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಮಂಗಳವಾರ ಮತ್ತೆ ಪಾಸಿಟಿವ್ ಬಂದ 14 ವರದಿಗಳು ಸೇರಿದಂತೆ ಮೇ 26ರವರೆಗೆ ಒಟ್ಟು 140 ವರದಿ ಪಾಸಿಟಿವ್ ಬಂದಿವೆ. ಈ ಪೈಕಿ 9 ಜನ ಗುಣಮುಖರಾಗಿದ್ದು, ಮಂಗಳವಾರ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ ಎಲ್ಲಾ ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ 223 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಮೇ 26ರವರೆಗೆ ಒಟ್ಟು 14,648 ಜನರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473–253950ಗೆ ಮಂಗಳವಾರ 19 ಕರೆಗಳು ಬಂದಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT