ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಬಳಕೆ: ₹5 ಸಾವಿರ ದಂಡ

Last Updated 14 ಜನವರಿ 2022, 6:45 IST
ಅಕ್ಷರ ಗಾತ್ರ

ಗುರುಮಠಕಲ್: ಕೋವಿಡ್ ಮಾರ್ಗಸೂಚಿಗಳ ಪಾಲನೆ ಪರಿಶೀಲಿಸಲು ಗುರುವಾರ ಪುರಸಭೆಯ ಮುಖ್ಯ ಅಧಿಕಾರಿ ಹಾಗೂ ಅಧಿಕಾರಿಗಳ ತಂಡ ಪಟ್ಟಣದಲ್ಲಿ ತಪಾಸಣೆ ನಡೆಸಿದ್ದು, ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಂದ ತಲಾ ₹100 ದಂಡ ವಸೂಲಿ ಮಾಡಿದರು.

ಪ್ಲಾಸ್ಟಿಕ್ ಬಳಕೆ ಸೇರಿದಂತೆ ವಿವಿಧ ಬಗೆಯ ನಿಷೇಧಿತ ಉತ್ಪನ್ನಗಳ ಬಳಕೆ ಹಾಗೂ ಮಾರಾಟದ ಕುರಿತು ಪರಿಶೀಲನೆ ನಡೆಸಿದರು.

ಮಾಸ್ಕ್ ಧರಿಸದವರಿಂದ ಒಟ್ಟು ₹5 ಸಾವಿರ ದಂಡ ವಸೂಲಿ ಮಾಡಿದರು. ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ತಟ್ಟೆ, ಲೋಟ ಸೇರಿದಂತೆ ಹಲವು ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡರು.

ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ, ಕಸದ ವಾಹನದಲ್ಲಿ ತ್ಯಾಜ್ಯ ಸುರಿಯಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದು ಕಂಡು ಬಂದರೆ ಅಂತವರ ಮೇಲೆ ಕ್ರಮ ಜರುಗಿಸಲಾಗುವುದು. ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದರೆ ದಂಡ ಹಾಕಲಾಗುವುದು ಎಂದು ಅಧಿಕಾರಿಗಳು ಸೂಚಿಸಿದರು.

ಖಾದ್ಯದ ಅಂಗಡಿ, ಹೋಟೆಲ್, ಕಿರಾಣಿ ಅಂಗಡಿ ಸೇರಿದಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ನಿಷೇಧದ ಕುರಿತು ಜಾಗೃತಿ ಮೂಡಿಸಲಾಯಿತು. ಹಲವು ಸಭೆಗಳಲ್ಲಿ ವರ್ತಕರಿಗೆ ಈ ಬಗ್ಗೆ ಮನವಿ ಮಾಡಲಾಗಿತ್ತು. ಆದರೆ, ಪ್ಲಾಸ್ಟಿಕ್ ವಸ್ತುಗಳು ಮಾರುಕಟ್ಟೆಯಲ್ಲಿ ಕಂಡು ಬಂದಿದ್ದರಿಂದ ಅವುಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಪುರಸಭೆಯ ಸಿಬ್ಬಂದಿ ತಿಳಿಸಿದರು.

‘ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಜನರು ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಓಡಾಡಬಾರದು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಗ್ರಾಹಕರು ತಮ್ಮ ಮನೆಗಳಿಂದ ಬಟ್ಟೆಯ ಚೀಲ ವಸ್ತುಗಳನ್ನು ಖರೀದಿಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಮನವಿ ಮಾಡಿದರು.

ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ, ನೈರ್ಮಲ್ಯಾಧಿಕಾರಿ ಪ್ರಶಾಂತ, ಆರೋಗ್ಯ ನಿರಿಕ್ಷಕರಾದ ರಾಮುಲು ಗೌಡ, ಪರಶುರಾಮ, ಬಸವರಾಜ, ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT