ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: 55 ಹೆಚ್ಚುವರಿ ಆಮ್ಲಜನಕ ಬೆಡ್‍ಗಳ ವ್ಯವಸ್ಥೆ

ಆಮ್ಲಜನಕ ಹಾಸಿಗೆ ಜೋಡಣೆ ಕಾರ್ಯ ಪರಿಶೀಲಿಸಿದ ಡಿಸಿ
Last Updated 7 ಮೇ 2021, 16:21 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 55 ಆಮ್ಲಜನಕ ಬೆಡ್‍ಗಳನ್ನು ವ್ಯವಸ್ಥೆ ಮಾಡಲಾಗುತ್ತಿದ್ದು, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ನಿರ್ಮಿತಿ ಕೇಂದ್ರದಿಂದ ಈ ಆಕ್ಸಿಜನ್ ಬೆಡ್‍ಗಳ ಜೋಡಣೆ ಕಾರ್ಯ ನಡೆಯುತ್ತಿದ್ದು, 55 ಹೆಚ್ಚುವರಿ ಆಮ್ಲಜನಕ ಬೆಡ್‍ಗಳ ಪೈಕಿ ಈಗಾಗಲೇ 30 ಬೆಡ್‍ಗಳ ಜೋಡಣೆ ಕಾರ್ಯ ಮುಗಿದಿದೆ. ಉಳಿದ 25 ಆಕ್ಸಿಜನ್ ಬೆಡ್‍ಗಳನ್ನೂ ಆದಷ್ಟು ಶೀಘ್ರ ವ್ಯವಸ್ಥೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಕಿರಣ್ ಕುಮಾರ ಹೂಗಾರ ಮಾತನಾಡಿ, 2-3 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ರೋಗಿಗಳ ಸೇವೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಆಮ್ಲಜನಕ ಬೆಡ್ ವ್ಯವಸ್ಥೆ ಮಾಡುವ ಸ್ಥಳ (ವಾರ್ಡ್)ವನ್ನು ಸ್ಯಾನಿಟೈನ್ ಮಾಡಿ ನಿರ್ಮಿತಿ ಕೇಂದ್ರದವರು ಕಾಮಗಾರಿ ಕೈಗೊಳ್ಳಲು ಅನುವು ಮಾಡಿಕೊಡಬೇಕು ಎಂದು ಸ್ಥಾನಿಕ ವೈದ್ಯಾಧಿಕಾರಿ ( ಆರ್‍ಎಂಒ) ಡಾ. ನೀಲಮ್ಮ ಅವರಿಗೆ ಸೂಚಿಸಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆ ಈಗಾಗಲೇ 132 ಆಕ್ಸಿಜನ್ ಬೆಡ್‍ಗಳ ಸಾಮರ್ಥ್ಯ ಹೊಂದಿದ್ದು, ಇದೀಗ ಹೆಚ್ಚುವರಿ 55 ಬೆಡ್‍ಗಳ ಸೇರ್ಪಡೆಯಿಂದ 187ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ತಿಳಿಸಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT