ಗುರುವಾರ , ಏಪ್ರಿಲ್ 15, 2021
29 °C
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕುರಿತು ಕಾರ್ಯಾಗಾರದಲ್ಲಿ ಡಾ.ಲಕ್ಷ್ಮೀಕಾಂತ ಹೇಳಿಕೆ

ಕ್ಷಯರೋಗ: 6 ತಿಂಗಳ ಚಿಕಿತ್ಸೆ ಪಡೆದರೆ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಕ್ಷಯರೋಗಕ್ಕೆ 6 ತಿಂಗಳ ಚಿಕಿತ್ಸಾ ವಿಧಾನ ಪೂರ್ಣಗೊಳಿಸಿದರೆ ಸಂಪೂರ್ಣವಾಗಿ ಗುಣಪಡಿಸಬಹುದು’ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಲಕ್ಷ್ಮೀಕಾಂತ ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಖಾಸಗಿ ಔಷಧ ವಿತರಕರಿಗೆ ಕ್ಷಯರೋಗ ಕುರಿತು ಮಾತ್ರೆಗಳನ್ನು ವಿತರಿಸುವ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಒಬ್ಬ ಕ್ಷಯರೋಗಿಯು ಸಂಪೂರ್ಣವಾಗಿ ಗುಣಮುಖರಾಗಲು ನಿರಂತರ 6 ತಿಂಗಳು ಚಿಕಿತ್ಸೆ ಪಡೆದುಕೊಳ್ಳಬೇಕು. ಕ್ಷಯರೋಗವು ಒಂದು ಸಾಂಕ್ರಾಮಿಕ ರೋಗವಾಗಿರುವುದರಿಂದ ಇದರ ಬಗ್ಗೆ ಎಲ್ಲರೂ ಜಾಗೃತರಾಗಬೇಕು’ ಎಂದು ಹೇಳಿದರು.

‘ಕ್ಷಯರೋಗಕ್ಕೆ ಸಂಬಂಧಪಟ್ಟಂತೆ ಬಹಳಷ್ಟು ಜನರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪೆಡೆಯುತ್ತಿದ್ದು, ಅವರು ಖಾಸಗಿ ಔಷಧಿ ಅಂಗಡಿಗಳ ಮಾತ್ರೆಗಳನ್ನು ತೆಗೆದುಕೊಳ್ಳುವವರ ಮಾಹಿತಿ ಸಂಗ್ರಹಣೆ ಮಾಡಿಕೊಂಡು ಪ್ರತಿ ತಿಂಗಳು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕಕ್ಕೆ ನೀಡಬೇಕೆಂದು ವಿತರಕರಿಗೆ’ ತಿಳಿಸಿದರು.

‘ಒಬ್ಬ ಕ್ಷಯರೋಗಿಯನ್ನು ಕಂಡು ಹಿಡಿದು ಮಾಹಿತಿ ನೀಡಿದರೆ ಅಂಥವರಿಗೆ ಸರ್ಕಾರದಿಂದ ₹500 ಮತ್ತು ಕ್ಷಯರೋಗಿಗೆ 6 ತಿಂಗಳ ಚಿಕಿತ್ಸೆ ನೀಡಿರುವಂಥ ವ್ಯಕ್ತಿಗೆ ₹1000 ಸಹಾಯಧನವನ್ನು ನಿಕ್ಷಯ ಪೋಷಣ ಯೋಜನೆಯಡಿ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

ಸಹಾಯಕ ಔಷಧ ನಿಯಂತ್ರಣಾಧಿಕಾರಿ ಪುಷ್ಪಪ್ರಿಯಾ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಭಗವಂತ ಅನ್ವಾರ ಸೇರಿದಂತೆ ಸಿಬ್ಬಂದಿ ಇದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.