ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: 61 ವರದಿ ನೆಗೆಟಿವ್, 84 ವರದಿ ಬಾಕಿ

ಹೋಮ್ ಕ್ವಾರಂಟೈನ್‍ನಲ್ಲಿ 16 ಜನ
Last Updated 14 ಏಪ್ರಿಲ್ 2020, 15:59 IST
ಅಕ್ಷರ ಗಾತ್ರ

ಯಾದಗಿರಿ:ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳ ಪೈಕಿ ಮಂಗಳವಾರ ಮತ್ತೆ 9 ವರದಿ ನೆಗೆಟಿವ್ ಬಂದಿದ್ದು, ಇಲ್ಲಿಯವರೆಗೆ ಒಟ್ಟು 61 ಮಾದರಿಗಳ ವರದಿ ನೆಗೆಟಿವ್ ಬಂದಂತಾಗಿದೆ. ಜಿಲ್ಲೆಯಲ್ಲಿ ಮಂಗಳವಾರ ಸಂಗ್ರಹಿಸಲಾದ 53 ಹೊಸ ಮಾದರಿಗಳು ಸೇರಿದಂತೆ 84 ಮಾದರಿಗಳ ವರದಿ ಬರಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದ್ದಾರೆ.

ಯಾದಗಿರಿ ತಾಲ್ಲೂಕಿನ ನಿಗದಿತ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 20 ಜನರನ್ನು ಹಾಗೂ ಸುರಪುರ ತಾಲ್ಲೂಕಿನ ನಿಗದಿತ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 15 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‍ನಲ್ಲಿ 11 ಜನರನ್ನು ಹಾಗೂ ಸುರಪುರ ಸೂಪರ್ ಕ್ವಾರಂಟೈನ್ ಕೇಂದ್ರದಲ್ಲಿ 15 ಜನರನ್ನು ಪತ್ಯೇಕವಾಗಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೋಮ್ ಕ್ವಾರಂಟೈನ್ ನಲ್ಲಿ 10 ಜನ:ಯಾದಗಿರಿ ವಿದೇಶದಿಂದ ಮರಳಿ ಬಂದ 71 ಜನರ ಪೈಕಿ ಒಟ್ಟು 61 ಜನ 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದು, ಬಾಕಿ 10 ಜನರನ್ನು ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ವೈರಸ್ ಸೋಂಕಿತ ರೋಗಿಗಳಿಗಾಗಿ ಯಾದಗಿರಿ ಹೊಸ ಜಿಲ್ಲಾಸ್ಪತ್ರೆಯಲ್ಲಿ 100 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಗಳನ್ನು ಮೀಸಲಿರಿಸಿದ್ದು, 6 ಕರೆಗಳು ಸ್ವೀಕೃತವಾಗಿವೆ ಎಂದು ತಿಳಿಸಿದ್ದಾರೆ.

ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

ಯಾದಗಿರಿತಾಲ್ಲೂಕಿನ ಬಾಡಿಯಾಳ ಗ್ರಾಮದ ನ್ಯಾಯಬೆಲೆ ಅಂಗಡಿ ಸಂಖ್ಯೆ-75 ರವರು ಪಡಿತರ ಆಹಾರ ಧಾನ್ಯ ವಿತರಣೆಯಲ್ಲಿ ಅವ್ಯವಹಾರ ಮಾಡಿರುವುದರಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ, 2016ರ ಕ್ಲಾಜ್ 12 (2) ರ ಮತ್ತು ತಿದ್ದುಪಡಿ ಆದೇಶ 2017ರ (ಇ)ರ ಡಿಯಲ್ಲಿ ಸದರಿ ಅಂಗಡಿಯ ಪರವಾನಗಿಯನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT