ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ತಂಬಾಕು ರಹಿತ ದಿನ: ಜಾಗೃತಿ ಜಾಥಾ

Last Updated 31 ಮೇ 2019, 15:16 IST
ಅಕ್ಷರ ಗಾತ್ರ

ಯಾದಗಿರಿ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೋಸ್ ಕ್ಯಾಂಪೆನಿಂಗ್ ಮತ್ತು ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹಬೀಬ್ ಉಸ್ಮಾನ್ ಪಟೇಲ್ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಜಾಗೃತಿ ಜಾಥಾವು ನಗರದ ನಗರದ ಹಳೆ ಬಸ್‍ನಿಲ್ದಾಣ ಎದುರಿನ ಪ್ರವಾಸಿ ಮಂದಿರದಿಂದ ಸುಭಾಶ್ಚಂದ್ರ ಬೋಸ್ ವೃತ್ತ, ಲಾಲ್ ಬಹಾದ್ದೂರ್ ಶಾಸ್ತ್ರಿ ವೃತ್ತ, ತಹಶೀಲ್ದಾರ್ ಕಚೇರಿ ಮೂಲಕ ಜಿಲ್ಲಾ ನ್ಯಾಯಾಲಯ ಆವರಣ ತಲುಪಿತು. ಮಾರ್ಗ ಮಧ್ಯದಲ್ಲಿ ಬೀಡಿ, ಸಿಗರೇಟ್ ಸೇದುತ್ತಿದ್ದ ವ್ಯಕ್ತಿಗಳಿಗೆ ಗುಲಾಬಿ ಹೂ ನೀಡಿ, ತಂಬಾಕಿನಿಂದಾಗುವ ದುಷ್ಪರಿಣಾಮ ಕುರಿತು ಅರಿವು ಮೂಡಿಸಲಾಯಿತು.

ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತರೆಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಮಹಾಲಕ್ಷ್ಮಿ ಸಜ್ಜನ್, ಡಾ.ಸುನಿತಾ ನಿನ್ನೆಕರ್, ಕಾರ್ಮಿಕ ಇಲಾಖೆ ಯಾದಗಿರಿ ವೃತ್ತ ನಿರೀಕ್ಷಕ ಶಿವಶಂಕರ ಬಿ.ತಳವಾರ, ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ, ನಗರಸಭೆ ಆರೋಗ್ಯ ನಿರೀಕ್ಷಕ ಸುರೇಶ ಶೆಟ್ಟಿ, ತಂಬಾಕು ನಿಯಂತ್ರಣ ಆಪ್ತ ಸಮಾಲೋಚಕ ನಟರಾಜ, ಡಾಟಾ ಮ್ಯಾನೇಜರ್ ಎಚ್.ಆಂಜನೇಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT