ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಪುರ ಬಸವಸಾಗರ ಜಲಾಶಯ: ಕೃಷ್ಣಾ ನದಿಗೆ 9 ಸಾವಿರ ಕ್ಯುಸೆಕ್ ನೀರು

Last Updated 7 ಜೂನ್ 2021, 5:55 IST
ಅಕ್ಷರ ಗಾತ್ರ

ನಾರಾಯಣಪುರ (ಹುಣಸಗಿ): ಕಳೆದ ಎರಡು ದಿನಗಳಿಂದ ಮಳೆ ಆರಂಭವಾಗಿದ್ದು, ರಾಜ್ಯದ ನೀರಾವರಿ ಯೋಜನೆಗಳಲ್ಲಿ ಒಂದಾದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಇದರಿಂದಾಗಿ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ. ಜಲಾಶಯದ ಕ್ರಷ್ಟ್‌ಗೇಟ್‌ಗಳಿಂದ 6 ಸಾವಿರ ಕ್ಯುಸೆಕ್ ಹಾಗೂ ಮುರುಡೇಶ್ವರ ಜಲ ವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯುಸೆಕ್ ಒಟ್ಟು 9 ಸಾವಿರ ಕ್ಯುಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಜನ ಜಾನುವಾರುಗಳು ನದಿಗೆ ಇಳಿಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.

ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಕಳೆದ ನಾಲ್ಕೈದು ದಿನಗಳಿಂದ ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯುತಿದ್ದು ಹಾಗೂ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ ಒಳಹರಿವು ದಾಖಲಾಗುತ್ತಿದೆ. ಹೀಗಾಗಿ ಕುಡಿಯುವ ನೀರು ಪೂರೈಕೆಗೆ ಬೇಕಾಗುವಷ್ಟು ವಾರ್ಷಿಕ ಬೇಡಿಕೆಗೆ ಬೇಕಾಗುವಷ್ಟು ನೀರಿನ ಸಂಗ್ರಹ ಮಟ್ಟವನ್ನು ಕಾಯ್ದುಕೊಂಡು ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತಿದೆ ಎಂದು ಅವರು ತಿಳಿಸಿದ್ದಾರೆ.

ಜಲಾಶಯಕ್ಕೆ 8000 ಕ್ಯುಸೆಕ್ ಒಳಹರಿವು ದಾಖಲಾಗಿದ್ದು 9000 ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ.

ಪ್ರತಿ ವರ್ಷ ಜುಲೈ ಎರಡನೇ ವಾರದಲ್ಲಿ ಕೃಷ್ಣಾ ನದಿಗೆ ಹಾಗೂ ನಾರಾಯಣಪುರ ಬಸವ ಸಾಗರಕ್ಕೆ ಒಳಹರಿವು ದಾಖಲಾಗುತ್ತಿತ್ತು. ಆದರೆ ಈ ಬಾರಿ ಒಂದು ತಿಂಗಳು ಮೊದಲೇ ನೀರು ಹರಿದುಬರುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT