ನಾರಾಯಣಪುರ: ಒಳಹರಿವು ಹೆಚ್ಚಾದ ಪರಿಣಾಮ ಬಸವಸಾಗರ ಜಲಾಶಯದ 25 ಗೇಟ್ ಹಾಗೂ ಖಾಸಗಿ ಎಂಪಿಸಿಎಲ್ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 95 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.
ಬಸವಸಾಗರಕ್ಕೆ ಆಲಮಟ್ಟಿ ಜಲಾಶಯದಿಂದ 85 ಸಾವಿರ ಕ್ಯುಸೆಕ್ ನೀರನ್ನು ಶುಕ್ರವಾರ ಬಿಡುಗಡೆ ಮಾಡಲಾಗುತ್ತಿದ್ದು, ಬಸವ ಸಾಗರ ಜಲಾಶಯದಿಂದ 95 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಅಚ್ಚುಕಟ್ಟು ಪ್ರದೇಶ, ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿದ್ದು, ಮಳೆ ಪ್ರಮಾಣ ತಗ್ಗಿದರೆ ಒಳಹರಿವು ಕಡಿಮೆಯಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.