ಗುರುವಾರ , ಆಗಸ್ಟ್ 11, 2022
21 °C
ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಸಿದ್ದ: ಚೋಳನ್

ಜಿಲ್ಲೆಯಲ್ಲಿ 9,96 ಲಕ್ಷ ಮತದಾರರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲೂ ಮತದಾರರ ಅಂತಿಮ ಪಟ್ಟಿ ಸಿದ್ಧವಾಗಿದ್ದು, 9,96,446 ಮತದಾರರು ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 2,291 ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಉತ್ಸುಕರಾಗಿದ್ದಾರೆ ಎಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಪಿ.ರಾಜೇಂದ್ರ ಚೋಳನ್ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಪಂ ಚುನಾವಣೆ ನಿಮಿತ್ತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 199 ಗ್ರಾಮ ಪಂಚಾಯಿತಿಗಳಿದ್ದು, ಯಾದಗಿರಿ, ಗುರುಮಠಕಲ್, ಶಹಾಪುರ, ವಡಗೇರಾ, ಸುರಪುರ, ಹುಣಸಗಿ ತಾಲ್ಲೂಕುಗಳ ಗ್ರಾಪಂ ಚುನಾವಣೆಗೆ ಅಧಿಕಾರಿಗಳು ಸಿದ್ಧತೆ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 4,97,902 ಪುರುಷ ಹಾಗೂ 4,98,534 ಮಹಿಳೆಯರು ಸೇರಿದಂತೆ ಒಟ್ಟು 9,96,436 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 2,291 ಅಭ್ಯರ್ಥಿಗಳ ಆಯ್ಕೆಯಾಗಲಿದ್ದಾರೆ ಎಂದು ಹೇಳಿದರು.

22 ಗ್ರಾಮ ಪಂಚಾಯಿತಿಗಳನ್ನು ಹೊಂದಿರುವ ಯಾದಗಿರಿ ತಾಲ್ಲೂಕು 1,57,555 ಮತದಾರರನ್ನು ಹೊಂದಿದ್ದರೆ, 17 ಗ್ರಾಪಂ ಒಳಗೊಂಡಿರುವ ಗುರುಮಠಕಲ್ ತಾಲೂಕು 1,06,109 ಮತದಾರರನ್ನು ಹೊಂದಿದೆ.

ಶಹಾಪೂರು ತಾಲ್ಲೂಕು 24 ಗ್ರಾ.ಪಂ ಹೊಂದಿದ್ದು, ಒಟ್ಟು 1,57,596 ಮತದಾರರನ್ನು ಒಳಗೊಂಡಿದೆ. ವಡಗೇರಾ ತಾಲೂಕು 17 ಗ್ರಾ.ಪಂ 94,991 ಮತದಾರರನ್ನು ಹೊಂದಿದೆ. ಸುರಪುರ ತಾಲ್ಲೂಕು 21 ಗ್ರಾ.ಪಂ ಇದ್ದು ಒಟ್ಟು 1,19,332 ಮತದಾರರ ಒಳಗೊಂಡರೆ ಹುಣಸಗಿ ತಾಲ್ಲೂಕು 18 ಗ್ರಾ.ಪಂ ಒಳಗೊಂಡಿದ್ದು, ಒಟ್ಟು 1,15,744 ಮತದಾರರ ಪಟ್ಟಿಯನ್ನು ಒಳಗೊಂಡಿದೆ ಎಂದು ಹೇಳಿದರು.

ಚುನಾವಣಾ ಆಯೋಗದ ನಿರ್ದೇಶನ:

ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಆಯೋಗದ ಸೂಚನೆಯಂತೆ ಮತದಾರರ ಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಹಲವು ಸಿದ್ದತಾ ಕಾರ್ಯಗಳು ನಡೆದಿವೆ. ಚುನಾವಣೆ ಕರ್ತವ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳಿಗೆ ವಿವಿಧ ರೀತಿಯ ತರಬೇತಿಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಸೇರಿದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಸೇರಿದಂತೆ ಸಭೆಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು