ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಬಹುದಿನಗಳ ಕನಸು ನನಸಾಯ್ತು: ಮುದ್ನಾಳ

ವಿವಿಧ ಬೇಡಿಕೆ ಈಡೇರಿಕೆಗೆ ವೇದಿಕೆಯಲ್ಲಿ ಮನವಿ ಸಲ್ಲಿಸಿದ ವೆಂಕಟರೆಡ್ಡಿ
Last Updated 7 ಜನವರಿ 2021, 4:09 IST
ಅಕ್ಷರ ಗಾತ್ರ

ಯಾದಗಿರಿ: ವಡಗೇರಾ ಸುತ್ತಮುತ್ತಲಿನ ಕೊನೆಯಂಚಿನ ಜಮೀನುಗಳಿಗೆ ಕೃಷ್ಣಾ ನದಿಯಿಂದ ನೀರು ಹರಿದು ಬರುತ್ತಿಲ್ಲ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಡಗೇರಾ ಬಳಿ ಬ್ರಿಡ್ಜ್‌ಕಂ ಬ್ಯಾರೇಜ್ ನಿರ್ಮಿಸಲು ಮುಂದಾಗಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಪ್ಲೋರೈಡ್‌ನಿಂದ ಈ ಭಾಗದ ಜನರು ಬಳಲುತ್ತಿದ್ದು, ಇದಕ್ಕೂ ಕ್ರಮಕೈಗೊಳ್ಳಬೇಕು ಎಂದರು.

ಇಡೀ ಕಲ್ಯಾಣ ಕರ್ನಾಟಕದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆ ಯಾದಗಿರಿ ಆಗಿದ್ದು, ಇಲ್ಲಿ ಸರ್ಕಾರಿ ಎಂಜನಿಯರಿಂಗ್ ಕಾಲೇಜು ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಜಿಲ್ಲೆಯ ಜನರಿಗೆ ಆರೋಗ್ಯ ಸೇವೆ ಒದಗಿಸುವುದರ ಮೂಲಕ ಆರೋಗ್ಯ ಸಂಜೀವಿನಿಯಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ನೂತನ ಜಿಲ್ಲಾಸ್ಪತ್ರೆ ನಿರ್ಮಾಣ ಮಾಡಿರುವುದು ಹಾಗೂ ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವುದರ ಮೂಲಕ ಈ ಭಾಗದ ಜನರ ಬಹುದಿನಗಳ ಕನಸನ್ನು ನನಸು ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಕೇಳಿದಾಗಲೆಲ್ಲಾ ಯಾದಗಿರಿ ಕ್ಷೇತ್ರಕ್ಕೆ ಅಭಿವೃದ್ಧಿಗಾಗಿ ಅನುದಾನದ ಹೊಳೆಯನ್ನೇ ಹರಿಸಿದ್ದಾರೆ ಎಂದು ಅಭಿಪ್ರಾಯಿಸಿದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಯಾದಗಿರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಂಕುಸ್ಥಾಪನೆ ಮತ್ತು ಉದ್ಘಾಟಿಸಿರುವುದು ಖುಷಿ ತಂದಿದೆ. ಸ್ಥಳೀಯ ಶಾಸಕರು ಹೇಳಿದಂತೆ ಎಂಜಿನಿಯರಿಂಗ್ ಕಾಲೇಜು ಮತ್ತು ತೋಟಗಾರಿಕೆ ವಿವಿ ನಿರ್ಮಿಸಲು ಕ್ರಮವಹಿಸಬೇಕು ಎಂದರು.

ಈ ವೇಳೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ(ರಾಜೂಗೌಡ), ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನವಣೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT