ಭಾನುವಾರ, ಜನವರಿ 17, 2021
28 °C
ಮಧ್ಯರಾತ್ರಿವರೆಗೆ ಮತ ಎಣಿಕೆ: 2,291 ಸ್ಥಾನಗಳಲ್ಲಿ 434 ಅವಿರೋಧ, 1,835 ಗೆಲುವು

ಗ್ರಾ.ಪಂ: ಕುಣಿದು ಗೆಲುವು ಸಂಭ್ರಮಿಸಿದ ವನಿತೆಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತದಲ್ಲಿ ನಡೆದ ಚುನಾವಣೆಯಲ್ಲಿ 2,291 ಸ್ಥಾನಗಳ ಪೈಕಿ 434 ಅವಿರೋಧ ಆಯ್ಕೆಯಾಗಿದ್ದರೆ, 1,835 ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಉಳಿದ 22 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿಲ್ಲ.

ಎಣಿಕೆ ವಿವರ: ಯಾದಗಿರಿ ತಾಲ್ಲೂಕಿನ 22 ಗ್ರಾಮ ಪಂಚಾಯಿತಿಗಳ 459 ಸ್ಥಾನಗಳ ಪೈಕಿ 99 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. 360 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿ ವಿಜಯ ಸಾಧಿಸಿದ್ದಾರೆ.

ಶಹಾಪುರ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳ 495 ಸ್ಥಾನಗಳ ಪೈಕಿ 87 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. 388 ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ಸುರಪುರ ತಾಲ್ಲೂಕಿನ 21 ಪಂಚಾ ಯಿತಿಗಳ 383 ಸ್ಥಾನಗಳ ಪೈಕಿ 58 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿ ದ್ದಾರೆ. 325 ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಹುಣಸಗಿ ತಾಲ್ಲೂಕಿನ 18 ಪಂಚಾಯಿತಿಗಳ 369 ಸ್ಥಾನಗಳ ಪೈಕಿ 81 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. 286 ಜನರು ಸ್ಪರ್ಧಿಸಿ ವಿಜಯಿಯಾಗಿದ್ದಾರೆ.

ಗುರುಮಠಕಲ್ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳ 302 ಸ್ಥಾನಗಳ ಪೈಕಿ 69 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. 233 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ವಡಗೇರಾ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳ 283 ಸ್ಥಾನಗಳ ಪೈಕಿ 40 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. 243 ಜನರು ಚುನಾವಣೆಗೆ ಸ್ಪರ್ಧಿಸಿ ಜಯ ಕಂಡಿದ್ದಾರೆ.

115 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆ

ಜಿಲ್ಲೆಯಲ್ಲಿ ಒಟ್ಟು 122 ಗ್ರಾಮ ಪಂಚಾಯಿತಿಗಳಿದ್ದು, ಇದರಲ್ಲಿ 3 ಮೂರು ಗ್ರಾಮ ಪಂಚಾಯಿತಿಗಳಿಗೆ ಅವಧಿ ಮುಗಿಯದ ಕಾರಣ ಚುನಾವಣೆ ನಡೆದಿಲ್ಲ. ಸುರಪುರ ತಾಲ್ಲೂಕಿನ ಎರಡು, ಗುರುಮಠಕಲ್ ತಾಲ್ಲೂಕಿನ ಒಂದು ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆದಿಲ್ಲ.

ಉಳಿದಿರುವ 119 ಗ್ರಾಮ ಪಂಚಾಯಿತಿಗಳಲ್ಲಿ ಮೂರು ಗ್ರಾಮ ಪಂಚಾಯಿತಿಗಳಿಗೆ ಅವಿರೋಧ ಆಯ್ಕೆಯಾಗಿದೆ. ಒಂದು ಗ್ರಾಮ ಪಂಚಾಯಿತಿಗೆ ನಾಮಪತ್ರ ಸಲ್ಲಿಕೆಯಾಗಿಲ್ಲ.

ಶಹಾಪುರ ತಾಲ್ಲೂಕಿನ ಶಿರವಾಳ, ಹುಣಸಗಿ ತಾಲ್ಲೂಕಿನ ಕೊಡೇಕಲ್ಲ, ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮ ಪಂಚಾಯಿತಿಗೆ ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ.

ಜಾತಿವಾರು ಸದಸ್ಯರ ವಿವರ

ಸಾಮಾನ್ಯ ಕ್ಷೇತ್ರದಿಂದ 1,101, ಮಹಿಳಾ ಕ್ಷೇತ್ರದಿಂದ 1,168 ಸೇರಿದಂತೆ 2,269 ಸದಸ್ಯರು ಆಯ್ಕೆಯಾಗಿದ್ದಾರೆ.

ಅನುಸೂಚಿತ ಜಾತಿಯಲ್ಲಿ 592, ಅನುಸೂಚಿತ ಪಂಗಡದಲ್ಲಿ 320, ಹಿಂದುಳಿದ ಅ ವರ್ಗ 200, ಹಿಂದುಳಿದ ಬಿ ವರ್ಗ 47, ಸಾಮಾನ್ಯ ವರ್ಗದಿಂದ 1,110 ಸದಸ್ಯರು ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು