ಭಾನುವಾರ, ಡಿಸೆಂಬರ್ 6, 2020
19 °C
₹5 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

ಯಾದಗಿರಿ: ತೋಟಗಾರಿಕೆ ಉಪನಿರ್ದೇಶಕ ಎಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣ ಬಿಡುಗಡೆ ಮಾಡಲು ₹ 5 ಸಾವಿರ ಪಡೆಯುತ್ತಿದ್ದ ಆರೋಪದ ಮೇಲೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ನಗರದ ಜಿಲ್ಲಾಡಳಿತ ಭವನದಲ್ಲಿರುವ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಎವರ್‌ ಗ್ರೀನ್‌ ಕಂಪನಿಯ ಸಬ್ಸಿಡಿ ಹಣ ₹1.77 ಲಕ್ಷ ಬಿಡುಗಡೆ ಮಾಡಲು ಮಲ್ಲಿಕಾರ್ಜುನ ಮೊದಲ ಕಂತಿನಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ನಂತರ ₹1 ಸಾವಿರ ಕೊಡಲು ಹೇಳಿದ್ದರು. ವಿರೂಪಾಕ್ಷ‍ಪ್ಪ ಶಿವರಾಜಪ್ಪ ಪೊಲೀಸ್‌ ಪಾಟೀಲ ಅವರಿಂದ ₹5 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ’ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.

‘ಈ ವೇಳೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ತಮ್ಮಿಂದ ತಪ್ಪಾಗಿದೆ. ಬಿಟ್ಟು ಬಿಡುವಂತೆ ಎಸಿಬಿ ಎಸ್ಪಿ ಮಹೇಶ ಮೇಘಣ್ಣವರ ಕಾಲುಮುಟ್ಟಿ ನಮಸ್ಕರಿಸಲು ಮುಂದಾಗಿದ್ದರು’ ಎಂದು ತಿಳಿದು ಬಂದಿದೆ.

ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಗುರುಪಾದಪ್ಪ ಬಿರಾದಾರ, ರಾಘವೇಂದ್ರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು