ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಆರ್ ಎಫ್ಒ ರಮೇಶ ಕಣಕಟ್ಟೆ ಕಚೇರಿ, ನಿವಾಸದ ಮೇಲೆ ಎಸಿಬಿ ದಾಳಿ

Last Updated 16 ಮಾರ್ಚ್ 2022, 9:41 IST
ಅಕ್ಷರ ಗಾತ್ರ

ಯಾದಗಿರಿ: ಯಾದಗಿರಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ರಮೇಶ ಕಣಕಟ್ಟೆ ಕಚೇರಿ ಮತ್ತು ಸರ್ಕಾರಿ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

6 ಜನ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದ್ದು, ಬೀದರ್ ಡಿವೈಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ಆರ್ ಎಫ್ ಒ ಅಧಿಕಾರಿ ರಮೇಶ್ ಕಣಕಟ್ಟೆ ಅವರನ್ನು ಮುಂದೆ ಕುಳ್ಳರಿಸಿಕೊಂಡು ಪರಿಶೀಲನೆ ನಡೆಯುತ್ತಿದೆ.

ಬೀದರ್ ನ ನಿವಾಸದ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.

ಶಹಾಪುರದಲ್ಲಿ ದಾಖಲೆ ಪರಿಶೀಲನೆ:

ಲೋಕೋಪಯೋಗಿ ಇಲಾಖೆಯ ಎಇಇ ಬಸವರಾಜ ಪಾಟೀಲ ಅವರ ಶಹಾಪುರದ ತಮ್ಮನ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ‌.

ಬಸವರಾಜ ಪಾಟೀಲ ಸಹೋದರ ಖಂಡಪ್ಪ ಪಾಟೀಲ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆಯಾಗಿದೆ.

ಶಹಾಪುರ‌ ಮನೆ ಸೇರಿದಂತೆ ನಾಲ್ಕು ಕಡೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.ಎಸಿಬಿ ಡಿವೈಎಸ್ಪಿ ಸಂತೋಷ ಬನ್ನಟ್ಟಿ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಕೆಬಿಜೆಎನ್ಎಲ್ ಅಧಿಕಾರಿ ಮನೆ ಮೇಲೆ ದಾಳಿ:

ಕೃಷ್ಣಾಭಾಗ್ಯ ಜಲ ನಿಗಮದ ದೇವದುರ್ಗ ಉಪವಿಭಾಗದ ಎಂಜಿನಿಯರ್ ಅಶೋಕರೆಡ್ಡಿ ನಿವಾಸದ ಮೇಲೆ 11 ಜನರ ಎಸಿಬಿ ತಂಡದಿಂದ ದಾಳಿ ಮಾಡಲಾಗಿದೆ.

ವಡಗೇರಾ ತಾಲ್ಲೂಕಿನ ಕದರಾಪುರ ಗ್ರಾಮದ ಎಇಇ ಅಧಿಕಾರಿ ಮನೆಯಲ್ಲಿ ಬೆಳಿಗ್ಗೆಯಿಂದ ಅಧಿಕಾರಿಗಳು ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಕಲಬುರಗಿ ಹಾಗೂ ರಾಯಚೂರು ಜಿಲ್ಲೆಯ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT