ಶುಕ್ರವಾರ, ಆಗಸ್ಟ್ 12, 2022
20 °C

ಎಸಿಬಿ ಬಲೆಗೆ ಬಿಸಿಎಂ ಅಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರಪುರ: ಇಲ್ಲಿಯ ಬಿಸಿಎಂ ಇಲಾಖೆಯ ಅಧಿಕಾರಿ ಹಣಮಂತ (ಬಾಬು) ಅವರು ಗುರುವಾರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುತ್ತಿದ್ದಾಗ ಯಾದಗಿರಿಯ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.

ತಾಲ್ಲೂಕಿನ ಬೈಲಾಪುರ ಗ್ರಾಮದ ನಾಗರಾಜ ಮೇಟಿ ಅವರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಬಿಸಿಎಂ ಅಧಿಕಾರಿ ₹5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ₹2 ಸಾವಿರ ಕೊಡುವಂತೆ ಒತ್ತಾಯಿಸಿದ್ದರು. ಹಣ ಪಡೆಯುತ್ತಿರುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

‘ದೂರುದಾರ ಶಾಂತಗೌಡ ಅಯ್ಯಣ್ಣ ಮೇಟಿ ಅವರ ಮಾಹಿತಿ ಮೇರೆಗೆ ಮತ್ತು ಕಲಬುರ್ಗಿ ಡಿವೈಎಸ್‍ಪಿ ಬಿ.ಬಿ. ಪಟೇಲ್ ಅವರ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದೆ. ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು’ ಎಂದು ದಾಳಿಯ ನೇತೃತ್ವ ವಹಿಸಿದ್ದ ಇನ್‌ಸ್ಪೆಕ್ಟರ್‌ ರಾಜು ಬಿರಾದಾರ ಸುದ್ದಿಗಾರರಿಗೆ ತಿಳಿಸಿದರು.

ಇನ್‌ಸ್ಪೆಕ್ಟರ್‌ ರಾಘವೇಂದ್ರ ಕಲಬುರ್ಗಿ, ಸಿಬ್ಬಂದಿಗಳಾದ ಹೆಡ್‌ಕಾನ್‌ಸ್ಟೆಬಲ್‌ ವಿಜಯಕುಮಾರ, ಹೆಡ್‌ಕಾನ್‌ಸ್ಟೆಬಲ್‌ ಸಾಬಣ್ಣ, ಪಿಸಿಗಳಾದ ಅಮರನಾಥ, ಗುತ್ತಪಗೌಡ, ಎಎಚ್‌ಸಿ ರವಿ, ಎಪಿಸಿ ಪ್ರಕಾಶ ಮಾಳಿ ದಾಳಿಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.