ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮ

ಜಲ ಜೀವನ್‌ ಮಿಷನ್‌ ಅಡಿಯಲ್ಲಿ ನಾಲ್ಕು ಗ್ರಾಮಗಳಲ್ಲಿ ಶಂಕುಸ್ಥಾಪನೆ
Last Updated 24 ಫೆಬ್ರುವರಿ 2021, 3:27 IST
ಅಕ್ಷರ ಗಾತ್ರ

ಯಾದಗಿರಿ: ‘ಯಾದಗಿರಿ ವಿಧಾನಸಭಾಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಜಲ ಜೀವನ ಮಿಷನ್ ಯೋಜನೆ ಜಾರಿಗೆ ತರಲಾಗುತ್ತಿದೆ.ಈ ಮೂಲಕ ಪ್ರತಿ ಮನೆ ಮನೆಗೆ ನೀರು ತಲುಪಿಸುವಕನಸುನನಸು ಆಗುತ್ತಿದೆ’ ಎಂದುಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ತಾಲ್ಲೂಕಿನ ಆರ್‌.ಹೊಸಳ್ಳಿ, ಮೈಲಾಪುರ, ಮಸ್ಕನಳ್ಳಿಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ನೀರು ಸರಬರಾಜು ಕಲ್ಪಿಸುವ ಯೋಜನೆಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ದೇಶದ ಜನರು ಕುಡಿಯುವ ನೀರಿನ ಸಮಸ್ಯೆಯಿಂದಬಳಲಬಾರದೆಂದು ಪ್ರಧಾನಿನರೇಂದ್ರ ಮೋದಿ ಅವರುಜಲ ಜೀವನ್‌ ಮಿಷನ್ ಯೋಜನೆ ಜಾರಿಗೆ ತಂದಿದ್ದಾರೆ. ಪ್ರತಿ ಮನೆ ಮನೆಗಳಲ್ಲಿ ನಳದ ಸೌಕರ್ಯ ಕಲ್ಪಿಸಿ ನೀರು ಪೂರೈಸುವ ಯೋಜನೆ ಇದಾಗಿದೆ’ ಎಂದು ತಿಳಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಈ ಯೋಜನೆ ಕೈಗೊಳ್ಳಲಾಗುತ್ತಿದೆ‌.ಗ್ರಾಮದ ಪ್ರತಿಯೊಬ್ಬರೂ ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಎಸ್‌.ಪಾಟೀಲ ಯಡಿಯಾಪುರ ಮಾತನಾಡಿ, ‘ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಕ್ಷೇತ್ರದ ಜನರು ನೀರಿನ ಸಮಸ್ಯೆ ಎದುರಿಸುತ್ತಿರುವುದನ್ನು ಅರಿತು ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ನಳ ಕಲ್ಪಿಸಿ ನೀರು ಪೂರೈಸುವ ಯೋಜನೆ ಜಾರಿಗೆ ಬರುತ್ತಿದ್ದಾರೆ. ಅಭಿವೃದ್ಧಿ ಹರಿಕಾರರಾದ ಶಾಸಕರು ಯಾದಗಿರಿ ಕ್ಷೇತ್ರದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ’ ಎಂದರು.

ಇದೇ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವತಿಯಿಂದ ₹110.20 ಲಕ್ಷ ವೆಚ್ಚದ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ನೀರು ಸರಬರಾಜು ಕಲ್ಪಿಸುವ ಯೋಜನೆಗೆ ಆರ್.ಹೊಸಳ್ಳಿ ಗ್ರಾಮದಲ್ಲಿಚಾಲನೆ ನೀಡಲಾಯಿತು.

ಆದೇ ರೀತಿ ವರ್ಕನಳ್ಳಿ ಗ್ರಾಮದಲ್ಲಿ 2019-20ನೇ ಸಾಲಿನ ಲೆಕ್ಕ ಶೀರ್ಷಿಕೆ ಕೆಕೆಆರ್‌ಡಿಬಿ ಮೈಕ್ರೋ ಯೋಜನೆ ಅಡಿಯಲ್ಲಿ ಯಾದಗಿರಿಯಿಂದ ಮೈಲಾಪುರಕ್ಕೆ ವಾಯ ವಾಯಾ ವರ್ಕನಳ್ಳಿ ರಸ್ತೆ ₹418.79 ಲಕ್ಷ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

‘ರಸ್ತೆ ನಿರ್ಮಾಣದಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜಿಲ್ಲಾ ಕೇಂದ್ರಕ್ಕೆ ತೆರಳಲು ಸಹಾಯವಾಗಲಿದೆ. ವಾಹನ ಸವಾರರಿಗೆ ಅನುಕೂಲವಾಗಲಿದೆ’ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ಈ ವೇಳೆ ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ, ಹಳಿಗೇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವೀಂದ್ರಪ್ಪ ಯಡಳ್ಳೋರ, ತಾಲ್ಲೂಕು ಪಂಚಾಯಿತಿ ಸದಸ್ಯ ಲಕ್ಷ್ಮೀ ಬಸಪ್ಪ, ವರ್ಕನಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶರಣಪ್ಪ, ಅಧಿಕಾರಿ ಆನಂದ ಸೇರಿದಂತೆ ಇಲಾಖಾಅಧಿಕಾರಿಗಳು ಇದ್ದರು.

ಜಲ ಜೀವನ್ ಮಿಷನ್‌ ಯೋಜನೆಯಡಿ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು.

ವೆಂಕಟರೆಡ್ಡಿ ಮುದ್ನಾಳ,ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT