ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ತತ್ವದಡಿ ಮುನ್ನಡೆಯಿರಿ: ಸುರೇಶ ಸಜ್ಜನ

Published 7 ಡಿಸೆಂಬರ್ 2023, 15:45 IST
Last Updated 7 ಡಿಸೆಂಬರ್ 2023, 15:45 IST
ಅಕ್ಷರ ಗಾತ್ರ

ಶಹಾಪುರ: ಯಾವುದೇ ಸಹಕಾರ ಸಂಘದಲ್ಲಿ ವಿಶ್ವಾಸ ಹಾಗೂ ನಂಬಿಕೆಯ ಭರವಸೆಯ ಮೇಲೆ ಉಳಿದುಕೊಂಡಿವೆ. ಸಹಕಾರ ತತ್ವದ ಅಡಿಯಲ್ಲಿ ನಾವು ಮುನ್ನಡೆಯಬೇಕು. ಸಹಕಾರ ಸಂಘಗಳಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಎಂ.ನಾರಾಯಣ ಅವರು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ ತಿಳಿಸಿದರು.

ನಗರ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಎಂ.ನಾರಾಯಣ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಎಂ. ನಾರಾಯಣ ಅವರು ಸಹಕಾರ ಸಂಘಗಳಿಗೆ ಸೂಕ್ತ ಮಾರ್ಗದರ್ಶನ ನೀಡುವುದರ ಮೂಲಕ ಸಹಕಾರ ಸಂಘಗಳನ್ನು ಬಲಪಡಿಸುವ ಯತ್ನ ನಡೆಯಲಿ ಎಂದರು.

ಸಹಕಾರಿ ಯೂನಿಯನ್ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ವಿಶ್ವಾನಾಥರಡ್ಡಿ ದರ್ಶನಾಪುರ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಯಪ್ಪಗೌಡ ಹುಡೇದ ಅವರಿಗೆ ಆದರ್ಶ ಪುರುಷ ಪ್ರಶಸ್ತಿ ಲಭಿಸಿದ್ದಕ್ಕೆ ಗೌರವಿಸಲಾಯಿತು.

ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹಿಪಾಲರಡ್ಡಿ ಪಾಟೀಲ,  ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಎನ್. ಸಿ. ಪಾಟೀಲ್, ಬಸನಗೌಡ ಮರಕಲ್, ಚಂದ್ರಶೇಖರ ಲಿಂಗದಳ್ಳಿ, ರೇಖು ಚವ್ಹಾಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT