ಸಹಾಯವಾಣಿಗೆ ಕರೆ ಮಾಡಲು ಸಲಹೆ

7

ಸಹಾಯವಾಣಿಗೆ ಕರೆ ಮಾಡಲು ಸಲಹೆ

Published:
Updated:
Deccan Herald

ಹುಣಸಗಿ: ಗ್ರಾಮೀಣ ಭಾಗದಲ್ಲಿ  ಬಾಲ್ಯ ವಿವಾಹ ಪದ್ಧತಿ  ಜೀವಂತವಾಗಿದೆ.  ಇಂತಹ ಪ್ರಕರಣಗಳು ಕಂಡು ಬಂದಲ್ಲಿ ವಿದ್ಯಾರ್ಥಿಗಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೇಖರ ಹೂಗಾರ ಹೇಳಿದರು.

ಹುಣಸಗಿ ತಾಲ್ಲೂಕಿನ ಗೆದ್ದಲಮರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಲಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗುತ್ತಿದೆ.   ಮಕ್ಕಳು ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

 ಎಸ್‌ಡಿಎಂಸಿ ಅಧ್ಯಕ್ಷ ಸಿದ್ದರಾಮರೆಡ್ಡಿ ಸಾಹು ಮಾತನಾಡಿ, ಬಯಲಿನಲ್ಲಿ ಶೌಚಕ್ಕೆ ಹೋಗುವುದನ್ನು ನಿಲ್ಲಿಸಬೇಕು. ಪ್ರತಿ ಮನೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.
 
 ಮುಖ್ಯಶಿಕ್ಷಕ ಸಂಗಯ್ಯ ಬಾಚಿಹಾಳ, ಮಂಜುನಾಥ ಢನಾಳ, ರೇಣುಕಾ.ಪಿ, ಮಲ್ಲಿಕಾರ್ಜುನ ಬಂಗಾರಗುಂಡ, ಅಮರೇಶ ಹುಜರತಿ, ಮಂಜುನಾಥ.ಎಸ್, ಹನುಮಂತ ಮೇಟಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !