ಯಾದಗಿರಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ, ಬ್ಯಾಕ್ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಆರೋಗ್ಯ ಆವಿಷ್ಕಾರ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂಗ್ಲಿಷ್, ವಿಜ್ಞಾನ, ಗಣಿತ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಕಾರಣ ಫಲಿತಾಂಶದಲ್ಲಿ ಈ ಭಾಗದ ಜಿಲ್ಲೆಗಳು 30, 31, 32, 33, 34, 35ನೇ ಸ್ಥಾನ ಪಡೆಯುತ್ತಿವೆ. ಅಲ್ಲದೇ ಬ್ಯಾಕ್ಲಾಗ್ ಹುದ್ದೆಗಳೂ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಉಳಿದಿರುವುದರಿಂದ ಈ ಭಾಗ ಹಿಂದುಳಿದಿದೆ. ಹೀಗಾಗಿ ಕೂಡಲೇ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಖರ್ಗೆ ಅವರು ವೇದಿಕೆ ಮೇಲಿದ್ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿದರು.

‘ಈ ಪ್ರದೇಶದಲ್ಲಿ ಉದ್ಯೋಗ ನೇಮಕಾತಿಗೆ 371 (ಜೆ) ಕಾಯ್ದೆಯಲ್ಲಿ ಹಣಕಾಸು ಇಲಾಖೆಯ ಅನುಮೋದನೆ ಪಡೆಯುವ ಅವಶ್ಯಕತೆ ಇಲ್ಲ. ಹೀಗಾಗಿ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿ ಸ್ಥಳೀಯವರಿಗೆ ಉದ್ಯೋಗ ನೀಡುವತ್ತ ಗಮನಹರಿಸಬೇಕು’ ಎಂದರು.

ಮೈಸೂರು, ಬೆಂಗಳೂರಿನಂತೆ ಮಾಡಿ:

ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಎಸ್.ಎಂ. ಕೃಷ್ಣ ಅವರು ಬೆಂಗಳೂರನ್ನು ಸಿಂಗಪುರ ಮಾಡುತ್ತೇನೆ ಎಂದಿದ್ದರು. ಕಲ್ಯಾಣ ಕರ್ನಾಟಕ ಭಾಗವನ್ನು ಸಿಂಗಪುರ ಮಾಡುವುದು ಬೇಡ. ಬದಲಾಗಿ ಸಿದ್ದರಾಮಯ್ಯರ ಮೈಸೂರು ಹಾಗೂ ಡಿ.ಕೆ.ಶಿವಕುಮಾರರ ಬೆಂಗಳೂರಿನಂತೆ ಅಭಿವೃದ್ಧಿ ಮಾಡಿದರೆ ಸಾಕು. ಇದಕ್ಕಾಗಿ ಅಗತ್ಯ ಅನುದಾನ ನೀಡಬೇಕು’ ಎಂದು ಸಲಹೆ ನೀಡಿದರು.

- ‘₹13 ಸಾವಿರ ಕೋಟಿ ಅನುದಾನ’

‘ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ₹857 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಯೋಜನೆಗಳಿಗೆ ಅನುಮೋದನೆ ನೀಡಿದ್ದರಿಂದ ಈಗ ಅದಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ‘ಅಭಿವೃದ್ಧಿ ಸೂಚ್ಯಂಕ ನಿಗದಿ ನಿಟ್ಟಿನಲ್ಲಿ ಆರ್ಥಿಕ ತಜ್ಞ ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಉನ್ನತ ಸಮಿತಿ ರಚಿಸಿದ್ದು ಸಮಿತಿ ವರದಿಯಂತೆ ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ವಿಶೇಷ ಅನುದಾನ ನೀಡಲಾಗುವುದು’ ಎಂದು ಹೇಳಿದರು. ‘ನಮ್ಮ ಸರ್ಕಾರ ಬಂದ ನಂತರ ₹13 ಸಾವಿರ ಕೋಟಿ ಅನುದಾನವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನೀಡಲಾಗಿದೆ. ಈ ಮೂಲಕ ದಾಖಲೆ ಬರೆದಿದ್ದೇವೆ. ಅಧಿಕಾರಕ್ಕೆ ಬಂದ ಆರು ತಿಂಗಳ ಅವಧಿಯಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು ಇದುವರೆಗೆ ₹90 ಸಾವಿರ ಕೋಟಿ ಖರ್ಚು ಮಾಡಿದ್ದೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.