ಬುಧವಾರ, ಆಗಸ್ಟ್ 4, 2021
21 °C
ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 873ಕ್ಕೆ ಏರಿಕೆ

ಮತ್ತೆ 8 ಜನರಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಜಿಲ್ಲೆಯಲ್ಲಿ ಗುರುವಾರ 7 ವರ್ಷದ ಬಾಲಕ ಸೇರಿ 8 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ 873ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಯಾದಗಿರಿ ನಗರದ ದುಖನವಾಡಿಯ 34 ವರ್ಷದ ಮಹಿಳೆ (ಪಿ-7896), ತಾಲ್ಲೂಕಿನ ಚಂದಾಪುರದ 31 ವರ್ಷದ ಮಹಿಳೆ,  ವಡಗೇರಾದ 24 ವರ್ಷದ ಪುರುಷ, ಸುರಪುರ ತಾಲ್ಲೂಕಿನ ಬೈಚಬಾಳದ 30 ವರ್ಷದ ಪುರುಷ, 26 ವರ್ಷದ ಮಹಿಳೆ, ದಿವಳಗುಡ್ಡದ 38 ವರ್ಷದ ಮಹಿಳೆ, ಹೊಸ ಸಿದ್ದಾಪುರದ 36 ವರ್ಷದ ಮಹಿಳೆ, ಹುಣಸಗಿ ತಾಲ್ಲೂಕಿನ ಕೊಡೇಕಲ್‍ನ 7 ವರ್ಷದ ಬಾಲಕ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಮೂವರ ಸಂಪರ್ಕ ಪತ್ತೆ ಮಾಡಲಾಗುತ್ತಿದ್ದು, ಉಳಿದವರು ಮುಂಬೈಯಿಂದ ಬಂದವರು.

ಐವರು ಗುಣಮುಖ

ಸೋಂಕು ಪೀಡಿತ 873 ಪೈಕಿ ಮತ್ತೆ 5 ಜನ ಗುಣಮುಖರಾಗಿದ್ದಾರೆ. ಜೂನ್ 18ರವರೆಗೆ ಒಟ್ಟು 483 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಒಬ್ಬರು ಮೃತಪಟ್ಟಿದ್ದು, 389 ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,356 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,753 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಈವರಗೆ 52 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದೆ. ಜಿಲ್ಲೆಯ 21 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಗಳಲ್ಲಿ 883 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. 

***

ಅಂಗನವಾಡಿ ಸಹಾಯಕಿಗೆ ಸೋಂಕು
ನಗರದ ವಾರ್ಡ್ ಸಂಖ್ಯೆ 15ರ ನಿವಾಸಿ ಅಂಗನವಾಡಿ ಸಹಾಯಕಿಗೆ ಕೋವಿಡ್‌–19 ದೃಢಪಟ್ಟಿದೆ. ಇವರು ದುಕಾನವಾಡಿ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದುಖಾನವಾಡಿ ಬಡಾವಣೆಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟ ಕಾರಣ ಸೀಲ್ ಡೌನ್ ಮಾಡಲಾಗಿತ್ತು.

ದುಖಾನವಾಡಿ ಬಡಾವಣೆಯಲ್ಲಿ‌ ಕರ್ತವ್ಯದಲ್ಲಿದ್ದಾಗ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಇವರಿಗೆ ಹೇಗೆ ಸೋಂಕು ತಗುಲಿತು ಎನ್ನುವುದು ಪ್ರಶ್ನೆಯಾಗಿದೆ. ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಶೋಧ ಕಾರ್ಯ ಮುಂದುವರೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.