ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡಗೇರಾ: ಉತ್ತಮ ಬೀಜ ಬಿತ್ತನೆ ಮಾಡಿ: ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್

Last Updated 29 ಏಪ್ರಿಲ್ 2020, 10:59 IST
ಅಕ್ಷರ ಗಾತ್ರ

ವಡಗೇರಾ: ಮುಂಗಾರು ಹಂಗಾಮು ಸಮೀಪಿಸುತ್ತಿದೆ. ಹತ್ತಿ ಬಿತ್ತನೆ ಮಾಡುವ ರೈತರು ಅಧಿಕೃತ ಕಂಪನಿಗಳ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಬೇಕು ಎಂದು ಯಾದಗಿರಿ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಹಾಗೂ ಗ್ರಾಮಗಳಲ್ಲಿ‌ ಕಳಪೆ ಬಿತ್ತನೆ ಬೀಜ‌ ಮಾರಾಟ ಮಾಡುತಿದ್ದರೆ, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಕಳಪೆ ಬೀಜಗಳನ್ನು ಬಿತ್ತನೆ ಮಾಡಿ ರೈತರು ದುಡ್ಡು ಮತ್ತು ಜೀವನ ಹಾಳು ಮಾಡಿಕೊಳ್ಳಬಾರದು. ರೈತರು ಎಚ್ಚರಿಕೆಯಿಂದ ಬೀಜ ಖರೀದಿ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT