ಯಾದಗಿರಿ: ‘ಕೃತಕ ಬುದ್ಧಿಮತ್ತೆಯು (ಎಐ) ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಭಾರಿ ಬದಲಾವಣೆ ತರಲಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ನಗರ ಹೊರ ವಲಯದ ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಯಿಮ್ಸ್) ಚರಕ ಸಭಾಂಗಣದಲ್ಲಿ ಶನಿವಾರ ಯಿಮ್ಸ್ನ ಸೂಕ್ಷ್ಮಜೀವಶಾಸ್ತ್ರ ವಿಭಾಗ ಹಾಗೂ ಭಾರತೀಯ ವೈದ್ಯಕೀಯ ಸೂಕ್ಷ್ಮ ಜೀವಶಾಸ್ತ್ರಜ್ಞರ ಸಂಘ (ಎಐಎಂಎಂ) ಆಯೋಜಿಸಿದ್ದ 30ನೇ ಐಎಎಂಎಂ–ಕೆಸಿ ಮೈಕ್ರೊ‘ಎಐ’ಕಾನ್ ರಾಜ್ಯ ಸಮ್ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ವೈದ್ಯಕೀಯ ಸಾಧನಗಳ ನೆರವಿನಿಂದ ರೋಗಿಗಳ ರೋಗ ನಿರ್ಣಯ ಮಾಡುತ್ತಿದ್ದೇವೆ. ಭವಿಷ್ಯದಲ್ಲಿ ಇದು ಸೂಕ್ಷ್ಮಜೀವ ವಿಜ್ಞಾನ ಕ್ಷೇತ್ರದಲ್ಲಿಯೂ ಭಾರಿ ಬದಲಾವಣೆ ತರಲಿದೆ. ಮುಂಬರುವ ಬದಲಾವಣೆಗಳ ಚರ್ಚೆಗೆ ಈ ಸಮ್ಮೇಳನ ವೇದಿಕೆಯಾಗಲಿ’ ಎಂದರು.

‘ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಯ ಗುಣಮಟ್ಟದ ಸುಧಾರಣೆಗೆ ಸಾಧ್ಯವಾದ ಎಲ್ಲ ಬಗೆಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಮುಂದಿನ ಐದು ವರ್ಷಗಳಲ್ಲಿ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಹಾಗೂ ಕ್ಯಾನ್ಸರ್ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ಹಾಕಿಕೊಂಡಿದ್ದೇವೆ’ ಎಂದು ಹೇಳಿದರು.

‘ದೇಶದಲ್ಲಿ ಸುಮಾರು 1.10 ಲಕ್ಷ ವೈದ್ಯಕೀಯ ಸೀಟುಗಳಿವೆ. ಮೆಡಿಕಲ್ ಓದುವ ಇಚ್ಛೆಯಿಂದ ಪ್ರತಿ ವರ್ಷ ಸುಮಾರು 24 ಲಕ್ಷ ವಿದ್ಯಾರ್ಥಿಗಳು ನೀಟ್ನಂತಹ ಪರೀಕ್ಷೆ ಬರೆಯುತ್ತಾರೆ. ಒಂದು ಸೀಟ್ಗೆ 24 ವಿದ್ಯಾರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಮೆಡಿಕಲ್ ಕನಸು ಕಂಡಿರುವ ಕರ್ನಾಟಕದ ಪ್ರತಿಭಾನ್ವಿತ ಆಕಾಂಕ್ಷಿಗಳಿಗೆ ನೆರವಾಗಲು ಈ ವರ್ಷ 600 ಸೀಟುಗಳನ್ನು ಹೆಚ್ಚಳ ಮಾಡುವ ಗುರಿ ಇರಿಸಿಕೊಂಡಿದ್ದೇವೆ. ಅದರಲ್ಲಿ ಯಾದಗಿರಿ ಕಾಲೇಜಿನ 50 ಸೀಟುಗಳಿವೆ’ ಎಂದು ಮಾಹಿತಿ ನೀಡಿದರು.

ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಮಾತನಾಡಿ, ‘ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ಗ್ರಾಮೀಣ ಭಾಗದವರ ಸೇವೆಯಲ್ಲಿ ವೈದ್ಯರ ಪಾತ್ರ ಅನನ್ಯವಾಗಿದೆ’ ಎಂದರು.

‘ಯಿಮ್ಸ್’ ಮುಖ್ಯಸ್ಥ ಡಾ.ಸಂದೀಪ್ ಹರಸಂಗಿ ಮಾತನಾಡಿ, ‘ಈಗಿರುವ 150 ಎಂಬಿಬಿಎಸ್ ಸೀಟುಗಳನ್ನು 200ಕ್ಕೆ ಹೆಚ್ಚಳ ಮಾಡಲಾಗುತ್ತಿದೆ. ನರ್ಸಿಂಗ್ ತರಗತಿಗಳು ನಡೆಯುತ್ತಿದ್ದು, ಮುಂದಿನ ವರ್ಷದಿಂದ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳು ಆರಂಭವಾಗಲಿವೆ’ ಎಂದರು.

ಕಾರ್ಯಕ್ರಮದಲ್ಲಿ ಐಎಎಂಎಂ ಅಧ್ಯಕ್ಷರಾದ ನವಾಜ್ ಉಮರ್, ಸಂಘಟನಾ ಕಾರ್ಯದರ್ಶಿ ಡಾ. ಎಚ್. ಶ್ರೀದೇವಿ ಸೇರಿ ಇತರರು ಉಪಸ್ಥಿತರಿದ್ದರು.

‘ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’

‘ಕಲಬುರಗಿಯನ್ನು ಹೆಲ್ತ್ ಹಬ್ ಮಾಡಲಾಗಿದ್ದು ಯಾದಗಿರಿಯನ್ನು ಕೇಂದ್ರೀಕರಿಸಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲಾಗುವುದು’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ‘ಈಚೆಗೆ ಬಜೆಟ್ ಸಂಬಂಧ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಿದ್ದು ಬಜೆಟ್ನಲ್ಲಿ ವಿಜಯನಗರಕ್ಕೆ ಮೆಡಿಕಲ್ ಕಾಲೇಜು ಘೋಷಣೆಯಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಬಾಗಲಕೋಟೆ ರಾಮನಗರ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಉದ್ದೇಶವಿದೆ’ ಎಂದರು.

‘3 ಹೊಸ ಕಾಲೇಜು ಸ್ಥಾಪನೆಗೆ ಪ್ರಸ್ತಾಪ’

‘ರಾಜ್ಯದಲ್ಲಿ 600 ಹೆಚ್ಚುವರಿ ಮೆಡಿಕಲ್ ಸೀಟು ಹಾಗೂ ಮೂರು ಹೊಸ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾಪ ಸಲ್ಲಿಸಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು. ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಬಾಗಲಕೋಟೆ ರಾಮನಗರ ಮತ್ತು ಕನಕಪುರಕ್ಕೆ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಯ ಪ್ರಸ್ತಾಪ ಮಾಡಲಾಗಿದೆ. ವೈದ್ಯಕೀಯ ಕನಸು ಕಾಣುವ ಪ್ರತಿಭಾವಂತರಿಗೆ ಸರ್ಕಾರದಿಂದ ಸಹಕಾರ ನೀಡಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ತೆರೆದರೆ ಬಡವರಿಗೂ ಅನುಕೂಲ ಆಗಲಿದೆ’ ಎಂದರು. ಯಾದಗಿರಿ ಮೆಡಿಕಲ್ ಕಾಲೇಜಿನಲ್ಲಿ ಸಿಬ್ಬಂದಿ ಭರ್ತಿಗೆ ಟೆಂಡರ್ ಕರೆಯಲಾಗಿದೆ. ನಿಯಮಾನುಸಾರ ಹೊರಗುತ್ತಿಗೆ ಆಧಾರಿತ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿದೆ. ಆಡಳಿತಾತ್ಮಕ ತಾಂತ್ರಿಕ ಹಾಗೂ ಶೈಕ್ಷಣಿಕ ಅಂಶಗಳನ್ನು ಗಮನ ಹರಿಸಿ ಈ ಕುರಿತು ಎಲ್ಲಾ ಮಾಹಿತಿಯನ್ನು ಆಡಳಿತ ಮಂಡಳಿಗೆ ನೀಡಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.