ಬುಧವಾರ, ಜುಲೈ 28, 2021
26 °C

ಯಾದಗಿರಿ | ಕೆ-ಸೆಟ್‌ ಪರೀಕ್ಷೆ ಮುಂದೂಡಲು ಎಐಡಿಎಸ್‌ಒ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಕೊರೊನಾ ಸಂಕಷ್ಟದಲ್ಲಿ ಕೆ-ಸೆಟ್‌ ಪರೀಕ್ಷೆ ನಡೆಸುವುದು ಬೇಡ. ಪರೀಕ್ಷೆಯನ್ನು ಮುಂದೂಡಿ ಎಂದು ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಪಿ.ಸೈದಪ್ಪ, ಕಾರ್ಯದರ್ಶಿ ಬಿ.ಕೆ.ಸುಭಾಶ್ಚಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಎರಡು ವಾರಕ್ಕೂ ಹೆಚ್ಚು ದಿನಗಳಿಂದ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಹೋರಾಟ ನಿರತರಾಗಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಆನ್‍ಲೈನ್ ಚಳವಳಿಯಲ್ಲಿ ಪಾಲ್ಗೊಂಡಿದ್ದಾರೆ. ವಿದ್ಯಾರ್ಥಿಗಳು ಎತ್ತಿರುವ ಬೇಡಿಕೆಗಳ ಪರಿಣಾಮ ಸರ್ಕಾರ 20 ಜುಲೈ ರಂದು ಸಭೆ ಕರೆದಿದೆ. ಸಭೆಯಲ್ಲಿ ವಿದ್ಯಾರ್ಥಿಗಳ-ಪೋಷಕರ-ಶಿಕ್ಷಕರ ಹಿತದೃಷ್ಟಿಯಿಂದ ಸಿಇಟಿ ಮುಂದೂಡಬೇಕೆಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.