ಯಾದಗಿರಿ: ‘ಈಗಾಗಲೇ ಸರ್ಕಾರ ಹೊರಡಿಸಿದ ಆದೇಶದನ್ವಯ ರಾಜ್ಯದ 5900 ಗ್ರಾಮ ಪಂಚಾಯಿತಿಗಳ ಸರ್ಕಾರಿ ಶಾಲೆಗಳನ್ನು, ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸುವ ಮೂಲಕ ಅಲ್ಲಿನ 5 ಕಿ.ಮೀ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಬಾಗಿಲು ಮುಚ್ಚುವ ಮೂಲಕ ಬಡ ರೈತರ ಮತ್ತು ಕೂಲಿ ಕಾರ್ಮಿಕರ ಮಕ್ಕಳನ್ನು ಶಿಕ್ಷಣಿದಿಂದ ವಂಚಿತರನ್ನಾಗಿಸುವ ಹುನ್ನಾರ ನಡೆದಿದೆ’ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್(ಎಐಡಿಎಸ್ಒ) ಜಿಲ್ಲಾ ಘಟಕದ ಸಂಚಾಲಕಿ ಶಿಲ್ಪಾ ಬಿ.ಕೆ. ಆರೋಪಿಸಿದರು.

ತಾಲ್ಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯಡಿ ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್ಒ ನೇತೃತ್ವದಲ್ಲಿ ಜರುಗಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರದ ಅಂಕಿ ಅಂಶಗಳ ಪ್ರಕಾರ ಈಗಾಗಲೇ ಕಳೆದ 15 ವರ್ಷಗಳಲ್ಲಿ 17 ಲಕ್ಷ ವಿದ್ಯಾರ್ಥಿಗಳು ಶೀಕ್ಷಣದಿಂದ ವಂಚಿತರಾಗಿದ್ದಾರೆ. ಈಗ ಈ ಯೋಜನೆಯಿಂದ ಮತ್ತಿಷ್ಟು ಮಕ್ಕಳ್ಳು ವಂಚಿತರಾಗಲಿದ್ದಾರೆ’ ಎಂದರು.

‘ಈ ಯೋಜನೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿದೆ. ಆದರೆ, ನಮ್ಮ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಕೆಕೆಆರ್ಡಿಬಿ ಹಣವನ್ನು ಶಾಳೆಗಳ ಮುಚ್ಚಲು ಬಳಸುತ್ತಿರುವುದು ವಿಪರ್ಯಾಸ. ಬಡವರು, ರೈತರು ಮತ್ತು ಕಾರ್ಮಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ, ಶಾಲೆಯೇ ಮುಚ್ಚಿದರೆ ಏನು ಮಾಡುವುದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಕೆಕೆಎಂಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಜಮಾಲ್ ಸಾಬ್ ಮಾತನಾಡಿ, ‘ಸರ್ಕಾರಗಳು ನಿರಂತರ ಸಾರ್ವಜನಿಕ ಹಕ್ಕುಗಳ ಕಿತ್ತುಕೊಳ್ಳುತ್ತಿದೆ. ಬಡತನ ಹೆಚ್ಚುತ್ತಿದೆ, ಮೂಲ ಸೌಲಭ್ಯಗಳಿಲ್ಲದೇ ಸರ್ಕಾರಿ ಶಾಲೆಗಳ ಗುಣಮಟ್ಟ ಕುಸಿದಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿಲು ಸರ್ಕಾರಿ ಶಾಲೆಗಳನ್ನು ಉತ್ತಮವಾಗಿಸುವ ಕಾರ್ಯವನ್ನು ಬಿಟ್ಟು ಬಾಗಿಲು ಮುಚ್ಚುತ್ತಿರುವುದು ಮತ್ತು ಅದಕ್ಕೆ ಕಾರ್ಪೊರೇಟ್ ಸಂಸ್ಥೆಗಳಿಂದ ಸಾಲ ಪಡೆಯುತ್ತಿರುವುದು ಕ್ರೂರಕೃತ್ಯ. ಜನತೆ ಶಾಲೆಗಳ ರಕ್ಷಣೆಗೆ ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ’ ಎಂದರು.

ಗ್ರಾಮಸ್ಥರಾದ ಸುಭಾಷ ಪೂಜಾರಿ, ರಾಮಯ್ಯ ಖಾನಳ್ಳಿ, ಅಯ್ಯಪ್ಪ, ಕೋನಪ್ಪ ಚಂದನಕರ್, ಚಂದ್ರಶೇಖರ ಸೇರಿದಂತೆ ಗ್ರಾಮದ ಪೋಷಕರು, ಯುವಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.