ಯಾದಗಿರಿ: ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ಭರ್ತಿಗೆ ಒಳಮೀಸಲಾತಿಯ ಗೊಂದಲವನ್ನು ಪರಿಹರಿಸಿ ಕೂಡಲೇ ನೇಮಕಾತಿಯ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಷನ್ (ಎಐಡಿವೈಒ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಗ್ರೇಡ್ -2 ತಹಶೀಲ್ದಾರ್ ರವಿ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

‘ಕೇಂದ್ರದಲ್ಲಿ 9.79 ಲಕ್ಷ, ರಾಜ್ಯದ 43 ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇವೆ. ಐದಾರು ತಿಂಗಳಿನಿಂದ ರಾಜ್ಯದಾದ್ಯಂತ ಉದ್ಯೋಗ ಆಕಾಂಕ್ಷಿಗಳು ಹೋರಾಟ ನಡೆಸಿದರ ಪರಿಣಾಮವಾಗಿ ಬೆಳಗಾವಿಯ ಅಧಿವೇಶನದಲ್ಲಿ ಐದು ವರ್ಷ ವಯೋಮಿತಿ ಹೆಚ್ಚಿಸಿ, 56,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದರು. ಅಧಿವೇಶನ ಮುಗಿದು 3–4 ತಿಂಗಳ ಮುಗಿದರೂ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ. ವಿಳಂಬ ಮಾಡದೆ ಹುದ್ದೆಗಳು ಭರ್ತಿಗೆ ಅಧಿಸೂಚನೆ ಹೊರಡಿಸಬೇಕು’ ಎಂದು ಕೋರಿದರು.

‘56,432 ಹುದ್ದೆಗಳಿಗೆ ಒಳಮೀಸಲಾತಿ ಸಮಸ್ಯೆಯನ್ನು ಪರಿಹರಿಸಿ ವಿಳಂಬವಿಲ್ಲದೆ ಅಧಿಸೂಚನೆ ಹೊರಡಿಸಬೇಕು. ಶಿಕ್ಷಕರ ಹುದ್ದೆಯನ್ನು ನಾಶಮಾಡುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 22,000ಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಚಿತ್ರಕಲಾ, ಸಂಗೀತ, ದೈಹಿಕ ಶಿಕ್ಷಕರರು ಸೇರಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದರು.

‘ಪ್ರತಿ ವರ್ಷ ಖಾಲಿಯಾಗುವ ಹುದ್ದೆಗಳ ಭರ್ತಿಗೆ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು. ಕೇಂದ್ರದ 78 ಇಲಾಖೆಗಳಲ್ಲಿ ಖಾಲಿ ಇರುವ 9.79 ಲಕ್ಷ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಬೇಕು. ಸರ್ಕಾರಿ ವೆಚ್ಚ ಕಡಿತ ಮಾಡುವ ಹೆಸರಿನಲ್ಲಿ ಜಾರಿಗೊಳಿಸಲಾಗಿರುವ ಎಫ್ಆರ್ಬಿಎಂ ಕಾಯ್ದೆ ರದ್ದುಗೊಳಿಸಬೇಕು. ರಾಜ್ಯದಲ್ಲಿ ಹಾರ್ನಳ್ಳಿ ರಾಮಸ್ವಾಮಿ, ವೀರಪ್ಪ ಮೊಯಿಲಿ ಮತ್ತು ದೇಶಪಾಂಡೆ ನೇತೃತ್ವದ ಎಆರ್ಸಿ ಶಿಫಾರಸುಗಳನ್ನು ಕೈಬಿಡಬೇಕು’ ಎಂದು ಹೇಳಿದರು.

‘ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು. ನೇಮಕಾತಿಗಳಲ್ಲಿ ದುಬಾರಿ ಅರ್ಜಿ ಶುಲ್ಕ ಕೈಬಿಡಬೇಕು ಹಾಗೂ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯೂ ಕಲ್ಪಿಸಬೇಕು. ಉದ್ಯೋಗ ಅವಕಾಶ ದೊರೆಯುವವರಿಗೆ ಗೌರವಯುತ ಜೀವನ ನಡೆಸಲು ಸೂಕ್ತ ನಿರುದ್ಯೋಗ ಭತ್ಯೆ ನೀಡಬೇಕು’ ಎಂದು ಕೋರಿದರು.

‘ಕೆಪಿಎಸ್ಸಿಯಲ್ಲಿನ ಅಕ್ರಮ ತಡೆಗಟ್ಟಲು ರಾಜ್ಯ ಸರ್ಕಾರ ಹೋಟ ಸಮಿತಿ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ನೀತಿಯನ್ನು ರದ್ದುಗೊಳಿಸಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು, ಕಾಯಂ ನೇಮಕಾತಿಗಳನ್ನು ಮಾಡಬೇಕು’ ಎಂದರು.

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಚನ್ನಬಸವ ಜಾನೇಕಲ್, ಪ್ರಮುಖರಾದ ಮಂಜುನಾಥ್, ಶರಣಗೌಡ, ಹನುಮಂತ, ರಮೇಶ್, ರೆಡ್ಡಿ, ಪ್ರಕಾಶ್, ಹೊನ್ನಯ್ಯ, ಬೀರಲಿಂಗ ಸೇರಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.