ಯಾದಗಿರಿ: ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ತಕ್ಷಣ ಪರಿಹಾರಕ್ಕಾಗಿ ಅಕ್ಕ ವಾಹನ ಪಡೆಯು ತಕ್ಷಣಕ್ಕೆ ಸಹಾಯ ನೀಡಲಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.

ಜಿಲ್ಲಾಡಳಿತ ಆವರಣದಲ್ಲಿ ಇಂದು ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಅಕ್ಕ ಪಡೆ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆ, ಕಾಲೇಜು, ಬಾಲಕಿಯರ, ಮಹಿಳಾ ಹಾಸ್ಟೆಲ್, ಸಾರ್ವಜನಿಕ, ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆಗೆ ಆದ್ಯತೆ ನೀಡಲಾಗುತ್ತದೆ. ಅಕ್ಕ ಪಡೆಯಂತಹ ಯೋಜನೆಯನ್ನು ನಮ್ಮ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾರಿಗೊಳಿಸಲಾಗಿದೆ ಎಂದರು.

“ಅಕ್ಕ ಪಡೆ” ಅಭಯ ಆಸರೆ ಎಂದು ತಿಳಿಸುತ್ತಾ ಪೊಲೀಸ್ ಅಂದರೆ ಭಯ ಬೇಡ ಭರವಸೆ ಇರಲಿ ಎಂದು ಕಿವಿಮಾತು ಹೇಳಿದರು. ಜಿಲ್ಲೆಯಲ್ಲಿ ದೌರ್ಜನ್ಯ ಹಿಂಸೆ, ನಿರ್ಲಕ್ಷ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು ಅಕ್ಕ ಪಡೆಯ ಉದ್ದೇಶವಾಗಿದೆ ಎಂದರು. ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ ಎಂದರು.

ಸಹಾಯವಾಣಿಗಳಾದ (ಮಹಿಳಾ ಸಹಾಯವಾಣಿ-181, ಮಕ್ಕಳ ಸಹಾಯವಾಣಿ-1098, ತುರ್ತು ಪೊಲೀಸ್ ನೆರವು-112) ಕುರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಸಮುದಾಯದಲ್ಲಿ ಸ್ನೇಹಪರ ಮತ್ತು ವಿಶ್ವಾಸಾರ್ಹ ಸ್ಥಿತಿಯನ್ನು ಸ್ಥಾಪಿಸುವುದು ಸಂತ್ರಸ್ಥೆಯರ ಮತ್ತು ಕುಟುಂಬಗಳ ಭಯವಿಲ್ಲದೆ ಸಹಾಯ ಪಡೆಯಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಅವರು ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಸರ್ಕಾರದ ಯೋಜನೆಯಡಿ ಅಕ್ಕ ಪಡೆ ಯೋಜನೆ ಆರಂಭವಾಗಿದೆ. ಈ ಯೋಜನೆಯು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಮತ್ತು ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡ ಸಂಕಷ್ಟದಲ್ಲಿ ಕರೆಗಳಿಗೆ ತ್ಪರಿತವಾದ ಸ್ಪಂದಿಸಬೇಕು. ಸಮುದಾಯದ ತೊಡಗಿಸಿಕೊಳ್ಳುವಿಕೆ, ಲಿಂಗ ಸಮಾನತೆ, ಮಕ್ಕಳ ರಕ್ಷಣೆ, ಕಾನೂನು ಹಕ್ಕುಗಳು ತಿಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಥಾಧಿಕಾರಿ ಧರಣೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಚನ್ನಬಸಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಭೀಮಣ್ಣನಾಯಕ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.