ಕೇಂದ್ರದ ಮಾದರಿಯಲ್ಲಿ ರಾಜ್ಯ ಮೀಸಲಾತಿ ನೀಡಲಿ

7
ರಾಜನಹಳ್ಳಿ ವಾಲ್ಮೀಕಿ ಗುರುಪೀಠಾಧ್ಯಕ್ಷ ಪ್ರಸನ್ನಾನಂದ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯ

ಕೇಂದ್ರದ ಮಾದರಿಯಲ್ಲಿ ರಾಜ್ಯ ಮೀಸಲಾತಿ ನೀಡಲಿ

Published:
Updated:
Deccan Herald

ಯಾದಗಿರಿ:‘ ಪರಿಶಿಷ್ಟ ಪಂಗಡಕ್ಕೆ ರಾಜ್ಯ ಸರ್ಕಾರ ನೀಡಿರುವ ಶೇ7.5ರಷ್ಟು ಮೀಸಲಾತಿಯನ್ನು ಕೇಂದ್ರದ ಮಾದರಿಯಲ್ಲಿಯೇ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಿಗೂ ವಿಸ್ತರಿಸಬೇಕು’ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠಾಧ್ಯಕ್ಷ ಪ್ರಸನ್ನಾನಂದ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದರು.

ಇಲ್ಲಿನ ವಾಲ್ಮೀಕಿ ಭವನದಲ್ಲಿ ಹಲವು ಬೇಡಿಕೆ ಈಡೇರಿಕೆಗೆ ಕುರಿತು ಅ.15ರಂದು ಕಲಬುರ್ಗಿಯಲ್ಲಿ ಹಮ್ಮಿಕೊಂಡಿರುವ ಹೋರಾಟ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಪರಿಶಿಷ್ಟ ಜಾತಿ, ಪಂಗಡಕ್ಕೆ ರಾಜ್ಯ ಸರ್ಕಾರ ಶೇ 24ರಷ್ಟು ಮೀಸಲಾತಿ ಒದಗಿಸಿದೆ. ಆದರಲ್ಲಿ ಶೇ 7.5ರಷ್ಟು ಮೀಸಲಾತಿ ಪರಿಶಿಷ್ಟ ಪಂಗಡದವರಿಗೆ ನೀಡಿದ್ದರೂ, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುತ್ತಿಲ್ಲ. ಆದರೆ. ಕೇಂದ್ರ ಸರ್ಕಾರ ಶಿಕ್ಷಣ, ಉದ್ಯೋಗದಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ7.5ರಷ್ಟು ಮೀಸಲಾತಿ ನೀಡುತ್ತಿದೆ. ಕೇಂದ್ರ ಅನುಸರಿಸಿರುವ ಮಾರ್ಗಸೂಚಿಯನ್ನೇ ರಾಜ್ಯ ಅನುಸರಿಸಿ ಮೀಸಲಾತಿ ವಿಸ್ತರಿಸಬೇಕು’ ಎಂದು ಆಗ್ರಹಿಸಿದರು.

‘ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನಕಲಿ ಜಾತಿ ಪ್ರಮಾಣಪತ್ರಗಳನ್ನು ಕೆಲ ಸಮುದಾಯಗಳು ಪಡೆಯುತ್ತಿರುವ ಬಗ್ಗೆ ದೂರುಗಳು ಇವೆ. ನಕಲಿ ಜಾತಿಪ್ರಮಾಣ ಪತ್ರ ಪಡೆಯುವ ಸಮುದಾಯ ಹಾಗೂ ನೀಡುವ ಅಧಿಕಾರಿಗಳನ್ನು ಪತ್ತೆಹಚ್ಚಿ ನಕಲಿ ಜಾತಿಪ್ರಮಾಣಪತ್ರ ವಿತರಣೆಗೆ ಕಡಿವಾಣ ಹಾಕಬೇಕಿದೆ. ಈ ಭಾಗದ ಪ್ರಭಾವಿ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ನಕಲಿ ಜಾತಿ ಪ್ರಮಾಣಪತ್ರ ನಿಯಂತ್ರಿಸಲು ಮುಂದಾಗಬೇಕು’ ಎಂದು ಸ್ವಾಮೀಜಿ ಒತ್ತಾಯಿಸಿದರು.

‘ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರ ಹಿಂಬಡ್ತಿ ಕುರಿತು ಈಗಾಗಲೇ ಸರ್ಕಾರದ ಗಮನ ಸೆಳೆಯಲಾಗಿದೆ. ತಳವರ್ಗದ ಮಠಾಧೀಶರು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಈ ಕುರಿತು ಮನವರಿಕೆ ಕೂಡ ಮಾಡಲಾಗಿದೆ. ನ್ಯಾಯಾಲಯದ ಅಂತಿಮ ಆದೇಶ ಹೊರಬಿದ್ದ ಮೇಲೆ ಕಾನೂನುತಜ್ಞರ ಸಮಾಲೋಚನಾ ಸಭೆ ನಡೆಸಿ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಹಿಂಬಡ್ತಿ ನೌಕರರಿಗೆ ನ್ಯಾಯ ಒದಗಿಸಲಾಗುವುದು ಎಂಬುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ಪ್ರತ್ಯೇಕ ಸಚಿವಾಲಯ ಅಗತ್ಯ:‘ಸಮಾಜದ ಅಭಿವೃದ್ಧಿ ವೇಗ ಪಡೆಯಲು ಪ್ರತ್ಯೇಕ ಸಚಿವಾಲಯದ ಅಗತ್ಯ ಇದೆ. ಈ ನಿಟ್ಟಿನಲ್ಲಿ ಈಗ ರೂಪಿಸುತ್ತಿರುವ ಹೋರಾಟದಲ್ಲಿ ಇದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಅ. 15ರಂದು ಕಲಬುರ್ಗಿಯಲ್ಲಿ ನಡೆಯಲಿರುವ ಹೋರಾಟಕ್ಕೆ ಸಮಾಜದ ಸಮಸ್ತರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಬೇಕು’ ಎಂದು ಶ್ರೀಗಳು ಮನವಿ ಮಾಡಿದರು.

ಸಮಾಜದ ಮುಖಂಡರಾದ ದೇವೇಂದ್ರಪ್ಪಗೌಡ ಗೌಡಗೆರೆ, ಮಾನಪ್ಪ ವನದುರ್ಗ, ಸುದರ್ಶನ ನಾಯಕ, ಯಮನಪ್ಪ ನಾಯಕ ತನಿಖೆದಾರ, ಭೀಮರಾಯ ಠಾಣಾಗುಂದಿ ಹೋರಾಟಕ್ಕೆ ಅಗತ್ಯ ನೆರವು ನೀಡುವುದಾಗಿ ಸಭೆಯಲ್ಲಿ ಅಭಿಪ್ರಾಯ ಹಂಚಿಕೊಂಡರು.

ವಾಲ್ಮೀಕಿ ಸಮಾಜದ ಜಿಲ್ಲಾ ಅಧ್ಯಕ್ಷ ಮರೆಪ್ಪ ಮಗದಂಪುರ, ಪರಿಶಿಷ್ಟ ಪಂಗಡd ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯಮನಪ್ಪ ತನಿಖೆದಾರ, ಗೌಡಪ್ಪಗೌಡ ಆಲ್ದಾಳ, ಶರಣಪ್ಪ ಜಾಕನಳ್ಳಿ, ಗಂಗಾಧರ ನಾಯಕ್‌ ಸುರಪುರ ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !