ಯಾದಗಿರಿ: ಶೋಷಿತರು ಶಿಕ್ಷಣವನ್ನು ಪಡೆಯಬೇಕು. ಆ ಮೂಲಕ ಸಂಘಟಿತರಾಗಬೇಕು. ಹಕ್ಕುಗಳಿಗಾಗಿ ಹೋರಾಟ ಮಾಡಬೇಕು ಎಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮೇಗೌಡ ಹೇಳಿದರು.

ತಾಲ್ಲೂಕಿನ ರಾಮಸಮುದ್ರ ಗ್ರಾಮದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ 115ನೇ ಜಯಂತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ 131ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣ, ಸಂಘಟನೆ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ. ಇದರಿಂದ ಅಂಬೇಡ್ಕರ್ ಮತ್ತು ಜಗಜೀವನ್ ರಾಂ ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಶೋಷಿತರ ಏಳಿಗೆಗಗಿ ಶ್ರಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಮೇಟಿ, ಶಾಂತರಾಜ್ ಮೊಟ್ನಹಳ್ಳಿ, ಜಗದೀಶ್ ದಾಸನಕೇರಿ, ಕಾಶಪ್ಪ ಹೆಗ್ಗಣಗೇರಾ, ಹೊನ್ನೇಶ್ ದೊಡ್ಡಮನಿ, ಜಗದೀಶ್ ಗೌಡ, ಮೂರ್ತಿ ಅನಪುರ, ಬಸವರಾಜ್ ತೆಲಗರ್, ಬಸವರಾಜಪ್ಪ ಬಾಗ್ಲಿ, ಮಲ್ಲಿಕಾರ್ಜುನ ಜಲ್ಲಪ್ಪನೊರ್, ಮಲ್ಲಪ್ಪ ಸೈಕಲ್, ಬಸವರಾಜ ಬೊಂಬಾಯಿ, ಮಲ್ಲಿಕಾರ್ಜುನ, ತಾಯಪ್ಪ, ಹನುಮಂತ, ಶೇಖರ್, ಸಾಬಣ್ಣ, ಮಲ್ಲಿಕಾರ್ಜುನ ಇದ್ದರು. ಭೀಮರಾಯ ಪ್ರಾಸ್ತಾವಿಕ ಮಾತನಾಡಿದರು.

ಭೀಮರಾಯ ಶಹಾಬಾದ್ ಸ್ವಾಗತಿಸಿದರು. ಮಲ್ಲಿಕಾರ್ಜುನ ಎಸ್. ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.