ಗುರುವಾರ , ಜನವರಿ 23, 2020
27 °C
ಯರಗೋಳ: ವಿವಿಧೆಡೆ ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನ

‘ವಿದ್ಯಾರ್ಥಿಗಳಿಗೆ ಅಂಬೇಡ್ಕರ್‌ ಆದರ್ಶವಾಗಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯರಗೋಳ: ಗ್ರಾಮದ ಅಂಬೇಡ್ಕರ್ ಭವನದ ಎದುರು ಶುಕ್ರವಾರ ಡಾ.ಬಿ.ಆರ್‌.ಅಂಬೇಡ್ಕರ್ ಅವರ 63ನೇ ಪರಿನಿರ್ವಾಣ ದಿನ ಆಚರಿಸಲಾಯಿತು.

ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೇಣದ ಭತ್ತಿ ಬೆಳಗಿಸಲಾಯಿತು.

ಸಮಾರಂಭದಲ್ಲಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಶರಣು ಮೊಹಮ್ಮದರ್, ಗ್ರಾಮ ಘಟಕದ ಅಧ್ಯಕ್ಷ ಮಲ್ಲಪ್ಪ ಮಹಮ್ಮದರ್, ಮಲ್ಲು ತಳಮನೆ, ಸೈದಪ್ಪ ಸೊನ್ನದರ, ಸುಬ್ಬಣ್ಣ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ದೊಡ್ಡ ಮರೆಪ್ಪ ಚಡಬೋ ಇದ್ದರು.

ಬಸವಂತಪುರ: ಗ್ರಾಮದ ಶ್ರೀಬಾಲಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.

ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಕುರಕುಂದಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಶಿಕ್ಷಕರಾದ ಕಾಶಪ್ಪ ನಾಟಕರ್, ಸುನಿಲ್ , ಗೌರಮ್ಮ ಹಾಗೂ ರೂಪಾಲಿ ಇದ್ದರು .

ನಾಲವಾರ: ಗ್ರಾಮದ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸಲಾಯಿತು.

ವಸತಿ ನಿಲಯದ ಮೇಲ್ವಿಚಾರಕ ಸಿದ್ದರಾಮಪ್ಪ ದಿಬ್ಬ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿ,‘ಭಾರತದ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂಬೇಡ್ಕರ್ ಅವರು ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು’ ಎಂದರು.

ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕುಮಾರಸ್ವಾಮಿ ಹಿರೇಮಠ ಮಾತನಾಡಿ,‘ಅಂಬೇಡ್ಕರ್ ಅವರಂಥ ಮೇರು ನಾಯಕರು ನಮ್ಮ ದೇಶದಲ್ಲಿ ಜನ್ಮಿಸಿದ್ದು, ಪುಣ್ಯದ ವಿಷಯ. ವಿದ್ಯಾರ್ಥಿಗಳು ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಯರಗೋಳ: ಗ್ರಾಮದ ಗೌತಮ ಬುದ್ಧ ಪ್ರೌಢಶಾಲೆಯಲ್ಲಿ ಅಂಬೇಡ್ಕರ್ ಪರಿ ನಿರ್ವಾಣ ದಿನ ಆಚರಿಸಲಾಯಿತು. ಮುಖ್ಯಶಿಕ್ಷಕ ಲಕ್ಷ್ಮೀ ಕಾಂತ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು