ಯಾದಗಿರಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 2026–27ನೇ ಸಾಲಿನಲ್ಲಿ ₹ 500 ಕೋಟಿ ಅನುದಾನ ಮಂಜೂರು ಮಾಡುವಂತೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ ಮಾಡಿದರು.

‘ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಮೊಗವೀರ, ಕಬ್ಬೇರ, ಗಂಗಾಮಾತಸ್ತ ಸೇರಿದಂತೆ 37 ಪರ್ಯಾಯ ಪದಗಳನ್ನು ಒಳಗೊಂಡ ಸಮುದಾಯಗಳ ಆರ್ಥಿಕ ಹಾಗೂ ಶೈಕ್ಷಣಿಕ ಉತ್ತೇಜನಕ್ಕಾಗಿ ನಿಗಮ ಸ್ಥಾಪಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಸ್ಥಿತಿಯಲ್ಲಿದ್ದಾರೆ’ ಎಂದು ಹೇಳಿದ್ದಾರೆ.

‘ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ, ಸ್ವಯಂ ಉದ್ಯೋಗ ಯೋಜನೆಗಳು ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಹೆಚ್ಚಿನ ಬೇಡಿಕೆ ಇದೆ. 2025–26ರವರೆಗೆ ವಿವಿಧ ಯೋಜನೆಗಳಡಿ 35,248 ಅರ್ಜಿಗಳು ಸ್ವೀಕರಿಸಲಾಗಿದೆ. ಎಲ್ಲ ಅರ್ಹರಿಗೆ ಸಾಲ ಮತ್ತು ಸೌಲಭ್ಯ ಒದಗಿಸಲು ಹೆಚ್ಚಿನ ಅನುದಾನ ಅಗತ್ಯವಿದೆ’ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.