ಯಾದಗಿರಿ: ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಭಾರತ ಚುನಾವಣಾ ಆಯೋಗ ಪರಿಚಯಿಸಿರುವ ವೋಟರ್ ಹೆಲ್ಪ್ಲೈನ್ ಆ್ಯಪ್ ತುಂಬಾ ಸಹಕಾರಿಯಾಗಿದೆ. ವೋಟರ್ ಹೆಲ್ಪ್ಲೈನ್ ಆ್ಯಪ್ ಮೂಲಕ ಮತದಾರರು ಮನೆಯಲ್ಲಿಯೇ ಕುಳಿತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಇದೆ ಎಂದು ಜಿಲ್ಲಾ ಮಟ್ಟದ ಮಾಸ್ಟರ್ ಟ್ರೇನರ್ ಹಣಮಂತರಾವ್ ಗೊಂಗ್ಲೆ ತಿಳಿಸಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪರಿಶೀಲನಾ ಕಾರ್ಯಕ್ರಮದ ಅಂಗವಾಗಿ ವೋಟರ್ ಹೆಲ್ಪ್ಲೈನ್ ಆ್ಯಪ್ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ ಏನಾದರೂ ದೋಷಗಳು ಇದ್ದಲ್ಲಿ ಚುನಾವಣಾ ಶಾಖೆ, ಕಂಪ್ಯೂಟರ್ ಕೇಂದ್ರಗಳಿಗೆ ಅಲೆದಾಡಬೇಕಿಲ್ಲ. ತಮ್ಮಲ್ಲಿರುವ ಆ್ಯಂಡ್ರಾಯಿಡ್ ಮೊಬೈಲ್ ಮೂಲಕವೇ ಗುರುತಿನ ಚೀಟಿಯಲ್ಲಿನ ಮತದಾರರ ಫೋಟೋ, ಸ್ವ-ವಿಳಾಸ, ಜನ್ಮ ದಿನಾಂಕ, ವಯಸ್ಸು, ಹೆಸರು, ಲಿಂಗ, ಪೋಷಕರ ಹೆಸರು ತಿದ್ದುಪಡಿ ಮಾಡಬಹುದು. ಹೊಸ ಸೇರ್ಪಡೆಗೂ ಸಹ ಅವಕಾಶ ಕಲ್ಪಿಸಿಕೊಡಲಾಗಿದೆ. ಮತದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ತಿದ್ದುಪಡಿ ಮಾಡುವಾಗ ಸಂಬಂಧಪಟ್ಟ ಮೂಲ ದಾಖಲಾತಿಯನ್ನು ಅಪ್ಲೋಡ್ ಮಾಡುವುದು ಅವಶ್ಯವಿರುತ್ತದೆ. 01-01-2020ಕ್ಕೆ 18 ವರ್ಷ ಪೂರ್ಣಗೊಳಿಸುವ ಅಭ್ಯರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. 16 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಇವರನ್ನು ನಿರೀಕ್ಷಿತ ಮತದಾರರು ಎಂದು ಪರಿಗಣಿಸಲಾಗುತ್ತದೆ. 18 ವರ್ಷ ಪೂರ್ಣಗೊಂಡ ನಂತರ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಅಧಿಕಾರಿ ಅರುಣಕುಮಾರ ಕುಲಕರ್ಣಿ, ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಅಜೀತ್ ಜಿ.ನಾಯಕ, ಚುನಾವಣಾ ಶಾಖೆಯ ಶಿರಸ್ತೆದಾರ್ ಪರಶುರಾಮ, ಖಲೀಲ್ ಸಾಬ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.