ಮಂಗಳವಾರ, ಜನವರಿ 31, 2023
18 °C
ಸುರಪುರ; ಅಂಗವಿಕರ ದಿನಾಚರಣೆ

‘ಅಂಗವಿಕಲರಲ್ಲಿ ಆತ್ಮವಿಶ್ವಾಸ ತುಂಬಬೇಕು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರಪುರ: ‘ಅಂಗವಿಕಲರ ಬಗ್ಗೆ ಅನುಕಂಪ ಬೇಡ. ಅವರಲ್ಲಿ ಆತ್ಮವಿಶ್ವಾಸ ತುಂಬಿ ಸಮಾಜದ ಮುಖ್ಯ ವಾಹಿನಿಗೆ ತರುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದು ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ರಾಜಾ ಮುಕುಂದನಾಯಕ ಹೇಳಿದರು.

ಗರುಡಾದ್ರಿ ಕಲಾ ಮಂದಿರದಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಾಗರಿಕರ ಸಬಲೀಕರಣ ಇಲಾಖೆ, ಎಪಿಎಫ್, ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಮತ್ತು ಬಿ.ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಸಂಯುಕ್ತಾಶ್ರಯದಲ್ಲಿ ಅಂಗವಿಕಲರ ಸಾಧನ ಸಲಕರಣೆಗಳ ಮಾಪನ ಶಿಬಿರ ಉದ್ಘಾಟಿಸಿ ವರು ಮಾತನಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪನಾಯಕ ಮಾತನಾಡಿದರು.

ಎಪಿಡಿ ಸಂಸ್ಥೆಯ ಮಧು ಕೇಶವ್, ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ್ ನಿಂಬೂರ, ಎಪಿಫ್ ಸಂಪನ್ಮೂಲ ವ್ಯಕ್ತಿ ಅನ್ವರ್ ಜಮಾದಾರ ಮಾತನಾಡಿದರು.

ರಾಜಾ ಪಾಮನಾಯಕ, ಪ್ರಕಾಶ ಸಜ್ಜನ್, ಬಸವರಾಜ ಜಮದ್ರಖಾನಿ, ವೆಂಕಟೇಶ ನಾಯಕ ಬೈರಿಮಡ್ಡಿ, ಓಂ ಪ್ರಕಾಶ ಡೋಣೂರು, ಅಂಗವಿಕಲರ ಸಂಘದ ಅಧ್ಯಕ್ಷ ಮಾಳಪ್ಪ ಪೂಜಾರಿ, ಮಹಾದೇವಪ್ಪ, ರಾಜಶೇಖರ ದೇಸಾಯಿ, ಸುನೀಲ್‍ ಕುಮಾರ ಇದ್ದರು.

ಶಿಬಿರದಲ್ಲಿ 400ಕ್ಕೂ ಹೆಚ್ಚು ಜನರನ್ನು ಎಬಿಡಿ ಸಂಸ್ಥೆಯ ವೈದ್ಯಕೀಯ ತಂಡದವರು ತಪಾಸಣೆ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು