ಶುಕ್ರವಾರ, ಆಗಸ್ಟ್ 6, 2021
25 °C
ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಯಿಂದ ಮನವಿ

‘ಕೊರೋನಾ ವಾರಿಯರ್ಸ್‘ ಘೋಷಿಸಲು ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಯಿಂದ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಘೋಷಿಸಬೇಕೆಂದು ಒತ್ತಾಯಿಸಿ ನೌಕರರು ಗುರುವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇಲಾಖೆಯಲ್ಲಿ ವಾರ್ಡನ್, ಅಡುಗೆ ಸಿಬ್ಬಂದಿ ವರ್ಗ ಸೇರಿದಂತೆ ಇತರ ಸಿಬ್ಬಂದಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ಕೊರೊನಾ ವಾರಿಯರ್ಸ್‍ಗೆ ಸೇರ್ಪಡೆಗೊಳಿಸಿದಲ್ಲಿ ಅವರು ಮುಕ್ತವಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಇಲಾಖೆಯಲ್ಲಿ ವಾರ್ಡನ್ ಕೆಲಸ ಮಾಡುತ್ತಿರುವ ಬೆಂಗಳೂರಿನ ಉಮೇಶ್‌ ವೈರಸ್‍ನಿಂದ ಮೃತಪಟ್ಟಿದ್ದಾರೆ. ಸರ್ಕಾರ ಆತನ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಧನ ನೀಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲ್‍ರಡ್ಡಿ ಜೋಳದಡಿಗಿ, ಜಿಲ್ಲಾ ವಾರ್ಡನ್ ಸಂಘದ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ರುದ್ರಾವರ, ಶ್ರೀಹರಿ ಘಂಟಿ, ಸುರೇಶ್, ಬಸವರಾಜ ಸಜ್ಜನ್, ಜಗದೇವಿ, ಚಂಪಾದೇವಿ ಸೇರಿದಂತೆ ನೌಕರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.