ಯಾದಗಿರಿ: ಜಿಲ್ಲೆಯ ಗುರಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ತೆಲಂಗಾಣದ ಮೆಹಬೂಬ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ವೃದ್ಧೆ ಸಾಯಮ್ಮ(70) ಸಾವನ್ನಪ್ಪಿದ್ದಾರೆ.
ಮಂಗಳವಾರದಿಂದ ವಾಂತಿ-ಬೇಧಿಯಿಂದ ಸಾಯಮ್ಮ ಬಳಲುತ್ತಿದ್ದರು. ತೆಲಂಗಾಣದ ಮೆಹಬೂಬ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30 ಜನ ಆಸ್ಪತ್ರೆಗೆ ದಾಖಲಾಗಿದ್ದರು. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಿಗ್ಗೆ ಸಾವಿತ್ರಮ್ಮ ಸಾವನ್ನಪ್ಪಿದ್ದರು.
ಅನಪುರ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಗುರುರಾಜ ಹಿರೇಗೌಡರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ ಭೇಟಿ ನೀಡಿ ಕಾಯಿಸಿ, ಆರಿಸಿ ನೀರು ಕುಡಿಯುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದ್ದಾರೆ.
ಅನಪುರ ಗ್ರಾಮದಲ್ಲಿ ಅಧಿಕಾರಿಗಳ ತಂಡ ಬೀಡುಬಿಟ್ಟಿದ್ದು, ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮೂರು ಟ್ಯಾಂಕರ್ ಮೂಲಕ ಶುದ್ಧ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಅನಪುರ ಗ್ರಾಮದಲ್ಲಿ ಕಾಲರಾ ಕಾಣಿಕೊಂಡಿದ್ದು, ಮಂಗಳವಾರ, ಬುಧವಾರ ಉಲ್ಬಣವಾಗಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಇದ್ದವರಿಗೆ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದರೆ ಮಾತ್ರ ಜಿಲ್ಲಾಸ್ಪತ್ರೆಗೆ ಕಳಿಸಲಾಗುತ್ತಿದೆ. ನೀರು ಕಲುಷಿತ ಪೂರೈಕೆ ಆಗಿರುವುದು ಎರಡು ಕಡೆ ಕಂಡು ಬಂದಿದೆ. ಅವುಗಳನ್ನು ದುರಸ್ತಿ ಮಾಡಲಾಗುತ್ತಿದ್ದು, ಹತೋಟಿಗೆ ತರಲು ಶ್ರಮಿಸಲಾಗುತ್ತಿದೆ' ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತ ರೆಡ್ಡಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.