ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ಕಿ ನಾಪತ್ತೆ ಪ್ರಕರಣ: 13 ಮಂದಿಗೆ ನಿರೀಕ್ಷಣಾ ಜಾಮೀನು ಮಂಜೂರು

Published 22 ಡಿಸೆಂಬರ್ 2023, 5:55 IST
Last Updated 22 ಡಿಸೆಂಬರ್ 2023, 5:55 IST
ಅಕ್ಷರ ಗಾತ್ರ

ಯಾದಗಿರಿ: ಶಹಾಪುರದಲ್ಲಿನ ಟಿಎಪಿಸಿಎಂಎಸ್‌ನ ಆಹಾರ ಧಾನ್ಯ ಉಗ್ರಾಣ ಕೇಂದ್ರದಲ್ಲಿನ ಸುಮಾರು ₹2 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಸಂಬಂಧ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಗುರುವಾರ ಟಿಎಪಿಸಿಎಂಎಸ್‌ನ ಅಧ್ಯಕ್ಷ ಗುರುನಾಥರಡ್ಡಿ ಪಾಟೀಲ ಹಳಿಸಗರ ಸೇರಿ 13 ಮಂದಿ ಆಡಳಿತ ಮಂಡಳಿಯ ನಿರ್ದೇಶಕರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

‘ಟಿಎಪಿಸಿಎಂಎಸ್‌ನ ಅಧ್ಯಕ್ಷ ಗುರುನಾಥರಡ್ಡಿ ಪಾಟೀಲ ಹಳಿಸಗರ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಾದ ನಿಂಗಣ್ಣ, ಗದಿಗೆಪ್ಪ, ಬಸನಗೌಡ, ಬಸವರಾಜ, ವಿಜಯಕುಮಾರ, ಹನುಮಂತ, ಬಸವರಾಜ ಮೂಲಿಮನಿ, ಸೈಯದ್‌ ಮಿಯಾ ಜಾನಿ, ಶರಣಮ್ಮ ಆವಂಟಿ, ಕೃಷ್ಣಮ್ಮ, ರಂಗಪ್ಪ, ಬಸವರಾಜಪ್ಪಗೌಡ ಅವರಿಗೆ ನಿರೀಕ್ಷಣಾ ಜಾಮೀನು ದೊರಕಿದೆ‘ ಎಂದು ಸರ್ಕಾರಿ ಅಭಿಯೋಜಕರ (ಪಿಪಿ) ಕಚೇರಿಯ ಮೂಲಗಳು ತಿಳಿಸಿವೆ.

ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಜೆಎಂಎಫ್ ನ್ಯಾಯಾಲಯವು ವಜಾಗೊಳಿಸಿದೆ.

ಅಕ್ಕಿ ನಾಪತ್ತೆ ಪ್ರಕರಣ ಸಂಬಂಧ ನ.25ರಂದು ಟಿಎಪಿಸಿಎಂಎಸ್‌ ವ್ಯವಸ್ಥಾಪಕ ಶಿವರಾಜ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರ ವಿರುದ್ಧ ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT