ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ

Last Updated 5 ಆಗಸ್ಟ್ 2022, 13:39 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರ ಹುದ್ದೆಗೆ (ಗುತ್ತಿಗೆ ಆಧಾರದ ಮೇಲೆ) ನೇಮಕ ಮಾಡಿಕೊಳ್ಳಲು ಭಾರತೀಯ ಭಾಷಾ ಸಂಸ್ಥಾನ (ಸಿಐಐಎಲ್‌)ದಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಆಯ್ಕೆಯಾದವರು, ಕನ್ನಡದ ಅಭಿವೃದ್ಧಿಗಾಗಿ ಸಿಐಐಎಲ್‌ ನಿರ್ದೇಶಕರು ಹಾಗೂ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ನೋಡಲ್‌ ಅಧಿಕಾರಿಯ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನದಲ್ಲಿ ಹಾಗೂ ರಾಜ್ಯ ಸರ್ಕಾರದ ಸಮನ್ವಯದೊಂದಿಗೆ ಕೆಲಸ ಮಾಡಬೇಕಾಗುತ್ತದೆ. ವಾರ್ಷಿಕ ಪರಿಶೀಲನೆಗೆ ಒಳಪಟ್ಟಿದ್ದು, ಗರಿಷ್ಠ ಮೂರು ವರ್ಷಗಳ ಅವಧಿಗೆ ವಿಸ್ತರಿಸಬಹುದಾಗಿದೆ. ₹ 70ಸಾವಿರ ಮಾಸಿಕ ಕ್ರೋಢೀಕೃತ ವೇತನ ನೀಡಲಾಗುತ್ತದೆ. 65 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.

ಕನ್ನಡ ಭಾಷೆಗೆ ಸಂಬಂಧಿಸಿದಂತೆ ಭಾಷಾವಿಜ್ಞಾನ ಹಾಗೂ ಸಾಹಿತ್ಯದಲ್ಲಿ ಡಾಕ್ಟರೇಟ್ ಪದವಿ ಜತೆಗೆ ಕನಿಷ್ಠ 15 ವರ್ಷಗಳ ಸಂಶೋಧನೆ, ಬೋಧನಾ ಅನುಭವ ಅಥವಾ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 3 ವರ್ಷಗಳ ಆಡಳಿತಾತ್ಮಕ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಕನ್ನಡ ಶಾಸ್ತ್ರೀಯ ಭಾಷೆಯ ತಿಳಿವಳಿಕೆ ಉಳ್ಳವರಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿಗಳನ್ನು https://apply.ciil.org ಸಲ್ಲಿಸಬಹುದು ಅಥವಾ ada–ciilmys@gov.in ಇ–ಮೇಲ್ ಮಾಡಬಹುದು. ಅರ್ಜಿ ಸಲ್ಲಿಕೆಗೆ ಆ.15 ಕಡೆಯ ದಿನಾಂಕವಾಗಿದೆ ಎಂದು ಸಂಸ್ಥೆಯು ಅಧಿಸೂಚನೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT