ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ

Published 7 ಡಿಸೆಂಬರ್ 2023, 15:40 IST
Last Updated 7 ಡಿಸೆಂಬರ್ 2023, 15:40 IST
ಅಕ್ಷರ ಗಾತ್ರ

ಯಾದಗಿರಿ: 2023-24ನೇ ಶೈಕ್ಷಣಿಕ ಸಾಲಿಗಾಗಿ ಖಾಲಿ ಇರುವ ವಿಜ್ಞಾನ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೋಟ್ನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೀರಾಚಾರ್ ತಿಳಿಸಿದ್ದಾರೆ.

ಜವಳಿ ಇಲಾಖೆಯ ಹೈಟೆಕ್ ಜವಳಿ ಪಾರ್ಕ್‌ ಬಂದಳ್ಳಿಯಲ್ಲಿ ನಡೆಯುತ್ತಿರುವ ಯಾದಗಿರಿಯ ಮೋಟಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿಗಾಗಿ ವಿಜ್ಞಾನ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿಜ್ಞಾನ ವಿಷಯ ಬೋಧಿಸುವವರು ಬಿಎಸ್‌ಸಿ (ಸಿಬಿಝಡ್) ಪದವಿಯಲ್ಲಿ ಹಾಗೂ ಟಿಇಟಿ ಯಲ್ಲಿ ತೇರ್ಗಡೆ ಹೊಂದಿದ ಅರ್ಹರು ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಲು 2023ರ ಡಿಸೆಂಬರ್ 10ರ ಒಳಗೆ ಖುದ್ದಾಗಿ ವಸತಿ ಶಾಲೆಯ ಕಚೇರಿಗೆ ಬಂದು ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 99001 70042ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT