ಯಾದಗಿರಿ: ‘2024-25ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮಿಕಿ ಪ್ರಶಸ್ತಿಯನ್ನು ಅಕ್ಟೋಬರ್ ತಿಂಗಳಲ್ಲಿ ಜರುಗುವ ಜಯಂತಿ ವೇಳೆ ಪ್ರದಾನ ಮಾಡಲಾಗುವುದು. ಆಸಕ್ತ ಅರ್ಹರು ಪ್ರಶಸ್ತಿಗೆ ಅಗತ್ಯ ದಾಖಲೆಗಳೊಂದಿಗೆ ಸೆ.17ರವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಯಾದಗಿರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು.