ಶುಕ್ರವಾರ, ಜೂನ್ 25, 2021
29 °C

ಅರಕೇರಾ ಸಿದ್ದಲಿಂಗ ಶ್ರೀಗಳು ಲಿಂಗೈಕ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುರುಮಠಕಲ್: ತಾಲ್ಲೂಕಿನ ಅರಕೇರಾ (ಕೆ) ಗ್ರಾಮದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮ ಮಠದ ಸಿದ್ದಲಿಂಗ ಶ್ರೀಗಳು (48) ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಠದ ವಕ್ತಾರರು ತಿಳಿಸಿದ್ದಾರೆ. ಶ್ರೀಗಳ ಅಂತಿಮ ವಿಧಿವಿಧಾನಗಳನ್ನು ಶನಿವಾರ ಆಶ್ರಮದ ಆವರಣದಲ್ಲಿ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ಶ್ರೀಗಳು ಗುರುಮಠಕಲ್ ತಾಲ್ಲೂಕಿನ ಬಾಚವಾರ ಗ್ರಾಮದಲ್ಲಿ 1972 ಅಕ್ಟೋಬರ್ 2 ರಂದು ಜನಿಸಿದ್ದರು. ಯಾದಗಿರಿ ಹಾಗೂ ಹುಬ್ಬಳ್ಳಿ ಸಿದ್ದಾರೂಢರ ಮಠದಲ್ಲಿ ಅಭ್ಯಾಸ ಮಾಡಿದ್ದರು. ನಂತರ ಅರಕೇರಾ (ಕೆ) ಗ್ರಾಮದಲ್ಲಿ ಸಿದ್ದಾರೂಢರ ಆಶ್ರಮಕ್ಕೆ ಸಂಸ್ಥಾಪಕ ಪೀಠಾಧಿಪತಿಯಾಗಿದ್ದರು ಎಂದು ಮಠದ ಭಕ್ತರು ತಿಳಿಸಿದ್ದಾರೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು